ತುರ್ತು ಭೂಸ್ಪರ್ಶ ಮಾಡಿದ ಅಂತಾರಾಷ್ಟ್ರೀಯ ವಿಮಾನ; ತಪ್ಪಿದ ಅನಾಹುತ

 ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೂರ್ವ ನಿಗದಿಯಾಗದ ಅಂತಾರಾಷ್ಟ್ರೀಯ ವಿಮಾನವೊಂದು ಶನಿವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿದೆ. 

Last Updated : Apr 7, 2018, 07:14 PM IST
ತುರ್ತು ಭೂಸ್ಪರ್ಶ ಮಾಡಿದ ಅಂತಾರಾಷ್ಟ್ರೀಯ ವಿಮಾನ; ತಪ್ಪಿದ ಅನಾಹುತ title=

ನವದೆಹಲಿ : ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೂರ್ವ ನಿಗದಿಯಾಗದ ಅಂತಾರಾಷ್ಟ್ರೀಯ ವಿಮಾನವೊಂದು ಶನಿವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿದೆ. ಆದರೆ, ಇಳಿಯುವ ಮೊದಲು ಅನುಮತಿ ಪಡೆದಿತ್ತು ಎನ್ನಲಾಗಿದೆ. 

ವಿಮಾನದಲ್ಲಿನ ತಾಂತ್ರಿಕ ದೋಷದಿಂದಾಗಿ ABG 8772ಸಂಖ್ಯೆಯ ವಿಮಾನ ತುರ್ತು ಭೂ ಸ್ಪರ್ಶ ಮಾಡಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ. ತುರ್ತು ಭೂಸ್ಪರ್ಶ ಮಾಡಿದ ಕೂಡಲೇ ಸುಮಾರು 8 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕಾಗಮಿಸಿವೆ. 

ಸಿಐಎಸ್ಎಫ್ ಕಂಟ್ರೋಲ್ ರೂಂ ಈ ಬಗ್ಗೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆ ಐಜಿಐ ಸಂಜೆ 5.22ರಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದೆ. ನಂತರ  344 ಪ್ರಯಾಣಿಕರನ್ನು ಹೊತ್ತ ಈ ವಿಮಾನ ಸಂಜೆ 06:05 ಕ್ಕೆ ದೆಹಲಿ ವಿಮಾನ ನಿಲ್ದಾಣದ 1129 ರನ್ ವೇ ನಲ್ಲಿ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Trending News