ಪಿ.ಚಿದಂಬರಂ ನ್ಯಾಯಾಂಗ ಬಂಧನ ಅಕ್ಟೋಬರ್ 17 ರವರೆಗೆ ವಿಸ್ತರಣೆ

ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 17 ರವರೆಗೆ ದೆಹಲಿ ನ್ಯಾಯಾಲಯ ವಿಸ್ತರಿಸಿದೆ, ಇದನ್ನುಸಿಬಿಐ ತನಿಖೆ ನಡೆಸುತ್ತಿದ್ದು. ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಲು ಅದು ಅರ್ಜಿ ಸಲ್ಲಿಸಿತ್ತು.

Last Updated : Oct 3, 2019, 06:26 PM IST
ಪಿ.ಚಿದಂಬರಂ ನ್ಯಾಯಾಂಗ ಬಂಧನ ಅಕ್ಟೋಬರ್ 17 ರವರೆಗೆ ವಿಸ್ತರಣೆ  title=

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 17 ರವರೆಗೆ ದೆಹಲಿ ನ್ಯಾಯಾಲಯ ವಿಸ್ತರಿಸಿದೆ, ಇದನ್ನುಸಿಬಿಐ ತನಿಖೆ ನಡೆಸುತ್ತಿದ್ದು. ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಲು ಅದು ಅರ್ಜಿ ಸಲ್ಲಿಸಿತ್ತು.

ಶೀನಾ ಬೋರಾ ಹತ್ಯೆಗೆ ಸಂಬಂಧಿಸಿದಂತೆ ಮುಂಬೈ ಜೈಲಿನಲ್ಲಿದ್ದ ಪೀಟರ್ ಮತ್ತು ಇಂದ್ರಾಣಿ ಮುಖರ್ಜಿಯಾ ಅವರು ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಹೆಸರಿಸಿದ್ದಾರೆ. ಈ ಹಿನ್ನಲೆಯಲ್ಲಿ ಚಿದಂಬರಂ ವಿರುದ್ಧ 2017 ರಲ್ಲಿ ಜಾರಿ ನಿರ್ದೇಶನಾಲಯ ಮನಿ ಲಾಂಡರಿಂಗ್ ಪ್ರಕರಣವನ್ನೂ ದಾಖಲಿಸಿತ್ತು.

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರದ ಪ್ರಕರಣದಲ್ಲಿ ನಿಯಮಿತವಾಗಿ ಜಾಮೀನು ಕೋರಿ ಚಿದಂಬರಂ ಸುಪ್ರೀಂಕೋರ್ಟ್ ನಲ್ಲಿ ಹೊಸದಾಗಿ ಮನವಿ ಸಲ್ಲಿಸಿದ್ದರು. ಪಿ.ಚಿದಂಬರಂ ಪರವಾಗಿ ವಾದಿಸುತ್ತಿರುವ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ನ್ಯಾಯಮೂರ್ತಿ ಎನ್.ವಿ.ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರ ನ್ಯಾಯಪೀಠದ ಮುಂದೆ ತುರ್ತು ವಿಚಾರಣೆಗಾಗಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಈಗ ಅವರ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ಮುಂದೆ ಇಡಲು ನ್ಯಾಯಪೀಠ ನಿರ್ದೇಶಿಸಿದೆ.  

Trending News