ನವದೆಹಲಿ: ಐಎನ್ಎಕ್ಸ್ ಮೀಡಿಯಾ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಪುತ್ರ ಕಾರ್ತಿಗೆ ಈ ಪ್ರಕರಣದಲ್ಲಿ ಹಿನ್ನಡೆಯಾಗಿದ್ದು, ಆತನ ವಿರುದ್ಧ ದಾಖಲಿಸಲಾದ ಪಿಎಂಎಲ್ಎ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿದೆ.
ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಬಂಧನದಿಂದ ತಪ್ಪಿಸಿಕೊಳ್ಳಲು ಯಾವುದೇ ಮಧ್ಯಂತರ ರಕ್ಷಣೆ ನೀಡಲಾಗುವುದಿಲ್ಲ ಎಂದಿರುವ ಸುಪ್ರಿಂ ಕೋರ್ಟ್ ಹೆಚ್ಚಿನ ವಿಚಾರಣೆಯನ್ನು ಮಾರ್ಚ್ 9 ಕ್ಕೆ ಮುಂದೂಡಿದೆ.
ಜಾರಿ ನಿರ್ದೇಶನಾಲಯವು ನೀಡಿರುವ ಸಮನ್ಸ್ ರದ್ಧುಪಡಿಸುವಂತೆ ಕಾರ್ತಿ ಚಿದಂಬರಂ ಸೋಮವಾರ ಸುಪ್ರೀಂ ಕೋರ್ಟ್'ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ಸಿಬಿಐ ಕಾರ್ತಿ ಅವರನ್ನು ಭಾನುವಾರ ಮುಂಬೈನ ಬೈಕುಲಾ ಸೆಂಟ್ರಲ್ ಜೈಲ್ಗೆ ವಿಚಾರಣೆಗಾಗಿ ಕರೆದೊಯ್ಯಲಾಗಿತ್ತು.