ಕಾಶ್ಮೀರ ನಿರ್ಬಂಧದ ವಿಚಾರವಾಗಿ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಿ- ಸುಪ್ರೀಂ ತಾಕೀತು

370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕಾಶ್ಮೀರದಲ್ಲಿ ವಿಧಿಸಲಾಗಿರುವ ನಿರ್ಬಂಧಗಳ ಕುರಿತು ಎದ್ದಿರುವ ಪ್ರತಿಯೊಂದು ಪ್ರಶ್ನೆಗೆ ಸ್ಪಂದಿಸಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ಗುರುವಾರ ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ತಿಳಿಸಿದೆ.

Last Updated : Nov 21, 2019, 01:35 PM IST
ಕಾಶ್ಮೀರ ನಿರ್ಬಂಧದ ವಿಚಾರವಾಗಿ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಿ- ಸುಪ್ರೀಂ ತಾಕೀತು   title=

ನವದೆಹಲಿ:  370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕಾಶ್ಮೀರದಲ್ಲಿ ವಿಧಿಸಲಾಗಿರುವ ನಿರ್ಬಂಧಗಳ ಕುರಿತು ಎದ್ದಿರುವ ಪ್ರತಿಯೊಂದು ಪ್ರಶ್ನೆಗೆ ಸ್ಪಂದಿಸಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ಗುರುವಾರ ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ತಿಳಿಸಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠವು ಆಡಳಿತ ಮಂಡಳಿ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ತಿಳಿಸಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅರ್ಜಿದಾರರು ಎತ್ತುವ ಪ್ರತಿಯೊಂದು ಪ್ರಶ್ನೆಗೆ ನೀವು ಉತ್ತರಿಸಬೇಕಾಗಿದೆ. ನಿಮ್ಮ ಕೌಂಟರ್ ಅಫಿಡವಿಟ್ ಯಾವುದೇ ತೀರ್ಮಾನಕ್ಕೆ ಬರಲು ನಮಗೆ ಸಹಾಯ ಮಾಡುವುದಿಲ್ಲ. ನೀವು ಪ್ರಕರಣದ ಬಗ್ಗೆ ಸಾಕಷ್ಟು ಗಮನ ಹರಿಸುತ್ತಿಲ್ಲ ಎಂಬ ಅಭಿಪ್ರಾಯವನ್ನು ನೀಡಬೇಡಿ' ಎಂದು ನ್ಯಾಯಮೂರ್ತಿಗಳಾದ ಆರ್ ಸುಭಾಷ್ ರೆಡ್ಡಿ ಮತ್ತು ಬಿ.ಆರ್. ಗವಾಯಿ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

ಕಾಶ್ಮೀರದಲ್ಲಿನ ನಿರ್ಬಂಧಗಳ ಕುರಿತು ಅರ್ಜಿದಾರರು ಮಾಡಿದ ವಾದಗಳು ತಪ್ಪಾಗಿದೆ ಮತ್ತು ಅವರು ನ್ಯಾಯಾಲಯದಲ್ಲಿ ವಾದಿಸಿದಾಗ ಪ್ರತಿಯೊಂದು ಅಂಶಕ್ಕೂ ಸ್ಪಂದಿಸುತ್ತಾರೆ ಎಂದು ಮೆಹ್ತಾ ಹೇಳಿದರು.

ಸಾಲಿಸಿಟರ್ ಜನರಲ್ ತಮ್ಮ ಬಳಿ ಸ್ಟೇಟಸ್ ರಿಪೋರ್ಟ್ ಇದೆ, ಆದರೆ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಪ್ರತಿದಿನ ಬದಲಾಗುತ್ತಿರುವುದರಿಂದ ಅವರು ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ ಮತ್ತು ಅವರು ಸಲ್ಲಿಸುವ ಸಮಯದಲ್ಲಿ ನಿಖರವಾದ ಸ್ಥಿತಿಯನ್ನು ನ್ಯಾಯಾಲಯಕ್ಕೆ ತೋರಿಸುವುದಾಗಿ ಹೇಳಿದ್ದಾರೆ. 
 

Trending News