Jammu Kashmir: ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

Shopian Encounter: ಶೋಪಿಯಾನ್‌ನ ಕಿನಿಗಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮುಖಾಮುಖಿ ನಡೆದಿದೆ ಎಂದು ಕಾಶ್ಮೀರ ವಲಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

Written by - Yashaswini V | Last Updated : May 6, 2021, 08:04 AM IST
  • ಶೋಪಿಯಾನ್‌ನ ಕಿನಿಗಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮುಖಾಮುಖಿ
  • ದಕ್ಷಿಣ ಕಾಶ್ಮೀರದಲ್ಲಿ ಗುರುವಾರ ಮುಂಜಾನೆ ನಡೆದ ಎನ್‌ಕೌಂಟರ್‌
  • ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರ ಹತ್ಯೆ
Jammu Kashmir: ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ title=
Security Forces Kills 3 Terrorists in Encounter

ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ  (Shopian Encounter) ಭದ್ರತಾ ಪಡೆಗಳಿಗೆ ಉತ್ತಮ ಯಶಸ್ಸು ಸಿಕ್ಕಿದೆ. ದಕ್ಷಿಣ ಕಾಶ್ಮೀರದಲ್ಲಿ ಗುರುವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹತ್ಯೆಗೈದಿದ್ದು ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಮುಖಾಮುಖಿ ಇನ್ನೂ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಅಲ್-ಬದ್ರ್ ಎಂಬ ಭಯೋತ್ಪಾದಕ ಸಂಘಟನೆಯ ಮೂವರು ಉಗ್ರರ ಹತ್ಯೆ:
ಮಾಹಿತಿಯ ಪ್ರಕಾರ, ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರು ಅಲ್-ಬಾದರ್  (Al-Badar) ಎಂಬ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂದು ತಿಳಿದುಬಂದಿದೆ. 44 ರಾಷ್ಟ್ರೀಯ ರೈಫಲ್ಸ್ ಮತ್ತು ಎಸ್‌ಒಜಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ   3-4 ಭಯೋತ್ಪಾದಕರು ಭದ್ರತಾ ಪಡೆಗಳ ಬಲೆಗೆ ಸಿಕ್ಕಿಹಾಕಿಕೊಂಡರು.  

ಇದನ್ನೂ ಓದಿ- 'ಹಿಂದುಳಿದ ವರ್ಗಗಳನ್ನು ಗುರುತಿಸುವ ಅಧಿಕಾರ ರಾಜ್ಯಗಳಿಗೆ ಇಲ್ಲ'- ಸುಪ್ರೀಂ ಮಹತ್ವದ ತೀರ್ಪು

ಪೊಲೀಸರ ಪ್ರಕಾರ, ಭದ್ರತಾ ಪಡೆಗಳು ಭಯೋತ್ಪಾದಕರನ್ನು ಶರಣಾಗುವಂತೆ ಕೇಳಿದಾಗ, ಅವರು ಭದ್ರತಾ ಪಡೆಗಳ ಮೇಲೆ ಗ್ರೆನೇಡ್‌ಗಳನ್ನು ಎಸೆದು ಗುಂಡು ಹಾರಿಸಿದರು. ಇದರ ನಂತರ, ಭದ್ರತಾ ಪಡೆಗಳು ಸಹ ಸೂಕ್ತವಾದ ಉತ್ತರವನ್ನು ನೀಡಿತು ಮತ್ತು ಎನ್ಕೌಂಟರ್ ಪ್ರಾರಂಭವಾಯಿತು.

ಓರ್ವ ಭಯೋತ್ಪಾದಕ ಶರಣಾಗಿದ್ದಾನೆ:
ಈ ಘಟನೆ ಬಗ್ಗೆ ಮಾಹಿತಿ ನೀಡಿದ ಕಾಶ್ಮೀರ ವಲಯ ಪೊಲೀಸರು,  ಶೋಪಿಯಾನ್‌ನ (Shopian) ಕಿನಿಗಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮುಖಾಮುಖಿ ನಡೆದಿದೆ. ಇತ್ತೀಚೆಗೆ ಭಯೋತ್ಪಾದಕನಾಗಿದ್ದ ತೌಸಿಫ್ ಅಹ್ಮದ್ ಭದ್ರತಾ ಪಡೆಗಳಿಗೆ ಶರಣಾಗಿದ್ದಾನೆ. ಇದಲ್ಲದೆ ಎನ್‌ಕೌಂಟರ್‌ನಲ್ಲಿ 3 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ- Big Decision: Corona ವಿರುದ್ಧದ ಹೋರಾಟದಲ್ಲಿ 'Antibody Cocktail' ಬಳಕೆಗೆ CSSCO ಅನುಮತಿ

ವಿಶೇಷವೆಂದರೆ, ಇತ್ತೀಚಿನ ದಿನಗಳಲ್ಲಿ ಕಾಶ್ಮೀರದಲ್ಲಿ ಶಾಂತಿ ನೆಲೆಸಿರುವುದರಿಂದ ಭಯೋತ್ಪಾದಕ ಸಂಘಟನೆಗಳು ಗೊಂದಲಕ್ಕೀಡಾಗಿವೆ. ಅದಕ್ಕಾಗಿಯೇ ಅವರು ಕಣಿವೆಯಲ್ಲಿ ಭಯೋತ್ಪಾದನೆಯನ್ನು ಹರಡಲು ಪದೇ ಪದೇ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News