ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ₹2,100; ವರ್ಷಕ್ಕೆ 2 ಉಚಿತ LPG ಸಿಲಿಂಡರ್‌..!

Jharkhand assembly election 2024: ಜಾರ್ಖಂಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 2,100 ರೂ., ವರ್ಷಕ್ಕೆ 2 ಉಚಿತ LPG ಸಿಲಿಂಡರ್‌ ನೀಡುವುದು ಸೇರಿದಂತೆ ಹಲವಾರು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದ್ದಾರೆ.

Written by - Puttaraj K Alur | Last Updated : Nov 3, 2024, 08:38 PM IST
  • ಜಾರ್ಖಂಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಲವಾರು ಗ್ಯಾರಂಟಿ ಯೋಜನೆಗಳು
  • ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 2,100 ರೂ.ನ ಗ್ಯಾರಂಟಿ
  • ಪ್ರತಿ ಮನೆಗೆ ₹500ಗೆ ಎಲ್‌ಪಿಜಿ ಸಿಲಿಂಡರ್‌ ಮತ್ತು ವಾರ್ಷಿಕ 2 ಉಚಿತ ಸಿಲಿಂಡರ್‌
ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ₹2,100; ವರ್ಷಕ್ಕೆ 2 ಉಚಿತ LPG ಸಿಲಿಂಡರ್‌..! title=
ಬಿಜೆಪಿ ಗ್ಯಾರಂಟಿ ಯೋಜನೆ

BJP Manifesto: ಮುಂಬರುವ ಜಾರ್ಖಂಡ್‌ ವಿಧಾನಸಭಾ ಚುನಾವಣೆಗೆ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಭಾನುವಾರ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಜಾರ್ಖಂಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 2,100 ರೂ., ವರ್ಷಕ್ಕೆ 2 ಉಚಿತ LPG ಸಿಲಿಂಡರ್‌ ನೀಡುವುದು ಸೇರಿದಂತೆ ಹಲವಾರು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಜಾರ್ಖಂಡ್‌ ರಾಜ್ಯದ 81 ಸದಸ್ಯ ಬಲದ ಕ್ಷೇತ್ರಗಳಿಗೆ ನವೆಂಬರ್‌ 13 ಮತ್ತು 20ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ನ.23ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟಗೊಳ್ಳಲಿದೆ. 

ಇದನ್ನೂ ಓದಿ: ಸಂಡೂರಿಗೆ BJP ರಾಜ್ಯಾಧ್ಯಕ್ಷ ವಿಜಯೇಂದ್ರ ಆಗಮನ

ಬಿಜೆಪಿ ಪ್ರಣಾಳಿಕೆಯಲ್ಲಿ ಏನಿದೆ..?  

* ಪ್ರತಿ ಮನೆಗೆ ₹500ಗೆ ಎಲ್‌ಪಿಜಿ ಸಿಲಿಂಡರ್‌ ಮತ್ತು ವಾರ್ಷಿಕ 2 ಉಚಿತ ಸಿಲಿಂಡರ್‌

* ನುಸುಳುಕೋರರು ಆಕ್ರಮಿಸಿಕೊಂಡಿರುವ ಆದಿವಾಸಿಗಳ ಭೂಮಿಯನ್ನು ಆದಿವಾಸಿಗಳಿಗೆ ಹಿಂದಿರುಗಿಸುವುದಾಗಿ ಪ್ರತಿಜ್ಞೆ

* ಬುಡಕಟ್ಟು ಜನಾಂಗದವರನ್ನು ಮದುವೆಯಾಗುವ ನುಸುಳುಕೋರರ ಮಕ್ಕಳಿಗೆ ಬುಡಕಟ್ಟು ಸ್ಥಾನಮಾನ ರದ್ದು

* ಆದಿವಾಸಿಗಳನ್ನು ಏಕರೂಪ ನಾಗರಿಕ ಸಂಹಿತೆಯ (UCC) ವ್ಯಾಪ್ತಿಯಿಂದ ಹೊರಗಿಡಲಾಗುವುದು

* ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವುದಾಗಿ ಭರವಸೆ

* 5 ವರ್ಷಗಳಲ್ಲಿ ಯುವಕರಿಗೆ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ಅವಕಾಶಗಳ ಖಾತರಿ  

* 2,87,500 ಸರ್ಕಾರಿ ಹುದ್ದೆಗಳ ನೇಮಕಾತಿ ಪಾರದರ್ಶಕವಾಗಿ ನಡೆಯಲಿದ್ದು, ಮೊದಲ ಕ್ಯಾಬಿನೆಟ್‌ನಲ್ಲೇ ಪ್ರಕ್ರಿಯೆ ಶುರುವಾಗಲಿದೆ.

* 2025ರ ನವೆಂಬರ್‌ ಒಳಗೆ 1.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

ಇದನ್ನೂ ಓದಿ: ವಕ್ಫ್‌ ‌ನೋಟಿಸ್‌ನ್ನು ವಾಪಸ್‌ ಪಡೆಯಬೇಕು: CM ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News