ಜಾರ್ಖಂಡ್ ವಿಧಾನಸಭಾ ಚುನಾವಣೆ: 13 ಕ್ಷೇತ್ರಗಳಲ್ಲಿ ಮತದಾನ ಆರಂಭ

ತಮ್ಮ ಮತದಾನದ ಹಕ್ಕು ಚಲಾಯಿಸಲು ಅರ್ಹರಾಗಿರುವ 37 ಲಕ್ಷಕ್ಕೂ ಹೆಚ್ಚು ಮತದಾರರು, ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ 15 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 189 ಅಭ್ಯರ್ಥಿಗಳ ಚುನಾವಣಾ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.

Last Updated : Nov 30, 2019, 07:36 AM IST
ಜಾರ್ಖಂಡ್ ವಿಧಾನಸಭಾ ಚುನಾವಣೆ: 13 ಕ್ಷೇತ್ರಗಳಲ್ಲಿ ಮತದಾನ ಆರಂಭ title=
Photo courtesy: ANI

ನವದೆಹಲಿ: ಜಾರ್ಖಂಡ್‌ನ ಆರು ಜಿಲ್ಲೆಗಳಲ್ಲಿ 13 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ ಜಾರ್ಖಂಡ್ ವಿಧಾನಸಭಾ ಚುನಾವಣೆ(Jharkhand Assembly elections)ಗೆ ಮೊದಲ ಹಂತದಲ್ಲಿ ಚುನಾವಣೆ ಎದುರಿಸುತ್ತಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದ್ದು, 37 ಲಕ್ಷಕ್ಕೂ ಹೆಚ್ಚು ಮತದಾರರು 15 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 189 ಅಭ್ಯರ್ಥಿಗಳ ಚುನಾವಣಾ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಮತದಾನ ನಡೆಯುತ್ತಿರುವ ಎಲ್ಲಾ ಮತಗಟ್ಟೆಗಳಲ್ಲಿ ಸಾಕಷ್ಟು ಭದ್ರತಾ ವ್ಯವಸ್ಥೆ ಮಾಡಲಾಗಿದೆ.

"ಮೊದಲ ಹಂತದಲ್ಲಿ ಮತದಾನಕ್ಕೆ ಹೋಗುವ ಕ್ಷೇತ್ರಗಳಾದ್ಯಂತದ ಎಲ್ಲಾ ಮತಗಟ್ಟೆಗಳಲ್ಲಿ ಸಾಕಷ್ಟು ಭದ್ರತೆಯನ್ನು ಖಾತ್ರಿಪಡಿಸಲಾಗಿದೆ. ವಿಶೇಷ ಮತದಾರರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ" ಎಂದು ಜಾರ್ಖಂಡ್(Jharkhand) ಮುಖ್ಯ ಚುನಾವಣಾ ಅಧಿಕಾರಿ ವಿನಯ್ ಕುಮಾರ್ ಚೌಬೆ ಹೇಳಿದರು.

ಚತ್ರ, ಗುಮ್ಲಾ, ಬಿಶುನ್‌ಪುರ, ಲೋಹರ್‌ದಾಗ, ಮಾನಿಕಾ, ಲತೇಹರ್, ಪಂಕಿ, ಡಾಲ್ಟೋಂಗಂಜ್, ಬಿಶ್ರಾಂಪುರ, ಛತ್ತರ್‌ಪುರ, ಹುಸೇನಾಬಾದ್, ಗರ್ಹ್ವಾ ಮತ್ತು ಭವನಾಥಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ಕೆಲವು ದಿನಗಳ ಹಿಂದೆ ನಕ್ಸಲ್ ದಾಳಿ ನಡೆದ ಎರಡು ವಿಧಾನಸಭಾ ಕ್ಷೇತ್ರಗಳಾದ ಲತೇಹರ್ ಮತ್ತು ಮಾನಿಕಾದಲ್ಲಿ ಜಾರ್ಖಂಡ್‌ನ ಜಿಲ್ಲಾಡಳಿತ ಭದ್ರತೆಯನ್ನು ಬಿಗಿಗೊಳಿಸಿದೆ. ಈ ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನಕ್ಕೆ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡಿಲಾಗಿದ್ದು, ಮತದಾನವು ಶಾಂತಿಯುತವಾಗಿ ನಡೆಯುತ್ತದೆ ಎಂದು ಆಡಳಿತ ಮಂಡಳಿ ವಿಶ್ವಾಸ ವ್ಯಕ್ತಪಡಿಸಿದೆ.

"ನಮ್ಮ ಭದ್ರತಾ ಸಿದ್ಧತೆಗಳನ್ನು ನಾವು ಪೂರ್ಣಗೊಳಿಸಿದ್ದೇವೆ, ಅದು ಭದ್ರತೆಯಾಗಲಿ ಅಥವಾ ರವಾನೆಯಾಗಲಿ. ಅಗತ್ಯ ಸ್ಥಳಗಳಲ್ಲಿ ಭದ್ರತಾ ಪಡೆಗಳನ್ನು ಸಹ ನಿಯೋಜಿಸಲಾಗಿದೆ. ಮತದಾನವನ್ನು ಶಾಂತಿಯುತವಾಗಿ ನಡೆಸಲು ನಾವು ಸಿದ್ಧರಿದ್ದೇವೆ. ಹೈಪರ್ಸೆನ್ಸಿಟಿವ್ ಬೂತ್‌ಗಳನ್ನು ಮತ್ತಷ್ಟು ಕ್ಲಸ್ಟರ್‌ಗಳು, ಸೂಪರ್‌ಕ್ಲಸ್ಟರ್‌ಗಳು ಮತ್ತು ವಲಯಗಳಾಗಿ ವಿಂಗಡಿಸಲಾಗಿದೆ" ಎಂದು ಜಿಲ್ಲಾಧಿಕಾರಿ ಲತೇಹರ್, ಜೇಶನ್ ಕುಮರ್ ಗುರುವಾರ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದರು.

81 ಸದಸ್ಯರ ಸಭೆ ಹೊಂದಿರುವ ಜಾರ್ಖಂಡ್‌ನಲ್ಲಿ ಡಿಸೆಂಬರ್ 20 ರವರೆಗೆ ಐದು ಹಂತಗಳಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ರಾಜ್ಯದ 67 ವಿಧಾನಸಭಾ ಕ್ಷೇತ್ರಗಳು ಎಡಪಂಥೀಯ ಉಗ್ರವಾದದಿಂದ (ಎಲ್‌ಡಬ್ಲ್ಯುಇ) ಪ್ರಭಾವಿತವಾಗಿವೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಹೇಳಿದ್ದಾರೆ.

ಹಾಲಿ ಮುಖ್ಯಮಂತ್ರಿ ರಘುಬರ್ ದಾಸ್ ಎರಡನೇ ಬಾರಿಗೆ ಮುಖ್ಯಮಂತ್ರಿ ಪಟ್ಟವನ್ನು ಅಲಂಕರಿಸುವ ವಿಶ್ವಾಸದಲ್ಲಿದ್ದಾರೆ. ರಘುಬರ್ ದಾಸ್ ಪೂರ್ಣಾವಧಿಯನ್ನು ಪೂರ್ಣಗೊಳಿಸಿದ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿದ್ದಾರೆ. ಪ್ರಸ್ತುತ ವಿಧಾನಸಭೆಯ ಅಧಿಕಾರಾವಧಿ 2020 ರ ಜನವರಿ 5 ರಂದು ಕೊನೆಗೊಳ್ಳುತ್ತದೆ.

ಬಿಜೆಪಿಯ ಹೊರತಾಗಿ ಕಾಂಗ್ರೆಸ್, ಜೆಎಂಎಂ ಮತ್ತು ಆರ್‌ಜೆಡಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಮುಖ ಭೂಮಿಕೆಯಲ್ಲಿದ್ದಾರೆ. ಕಾಂಗ್ರೆಸ್, ಜೆಎಂಎಂ ಮತ್ತು ಆರ್‌ಜೆಡಿ ಒಟ್ಟಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿವೆ ಎಂಬುದು ಗಮನಾರ್ಹವಾಗಿದೆ.

2000ನೇ ವರ್ಷದಲ್ಲಿ ಜಾರ್ಖಂಡ್‌(Jharkhand)ನ್ನು ಬಿಹಾರದಿಂದ ಬೇರ್ಪಡಿಸಿದ ನಂತರ ನಡೆಯುತ್ತಿರುವ ನಾಲ್ಕನೇ ವಿಧಾನಸಭಾ ಚುನಾವಣೆ ಇದಾಗಿದೆ.

Trending News