ಜಮ್ಮು-ಕಾಶ್ಮೀರ: ಅನಂತನಾಗ್ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಎನ್‌ಕೌಂಟರ್‌ ಪ್ರದೇಶದಲ್ಲಿ ಭದ್ರತಾ ಪಡೆಯವರು ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಯುದ್ಧ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

Last Updated : Apr 25, 2019, 08:26 AM IST
ಜಮ್ಮು-ಕಾಶ್ಮೀರ: ಅನಂತನಾಗ್ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ title=

ಶ್ರೀನಗರ: ಜಮ್ಮು ಕಾಶ್ಮೀರದ ಅನಂತನಾಗ್ ನಲ್ಲಿ ಗುರುವಾರ ಬೆಳಿಗ್ಗೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಉಳಿದ ಉಗ್ರರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಗುರುವಾರ ಬೆಳಿಗ್ಗೆ ಅನಂತನಾಗಿನ ಬಿಜ್ಬೇಹರ್ ಬಾಘೆಂದರ್ ಮೋಹಲ್ಲದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆ ಇಬ್ಬರು ಉಗ್ರರನ್ನು ಮಣಿಸಿದ್ದಾರೆ. ಹತ ಭಯೋತ್ಪಾದಕರು  ಹಿಜ್ಬುಲ್ ಮುಜಾಹಿದೀನ್ಗೆ ಸಂಬಂಧ ಹೊಂದಿದ್ದಾರೆ ಎಂದು ಹೇಳಲಾಗಿದೆ. 

ಎನ್‌ಕೌಂಟರ್‌ ಪ್ರದೇಶದಲ್ಲಿ ಭದ್ರತಾ ಪಡೆಯವರು ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಯುದ್ಧ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬಳಿಕ ಭದ್ರತಾ ಪಡೆಯಿಂದ ಶೋಧ ಕಾರ್ಯ ಆರಂಭವಾಗಿತ್ತು ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.

ಏತನ್ಮಧ್ಯೆ, ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ಮಳೆ ಸುರಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡಿದ ಭದ್ರತಾ ಪಡೆ ಇಬ್ಬರನ್ನು ಬಲಿತೆಗೆದುಕೊಂಡಿದ್ದು, ಶೋಧ ಕಾರ್ಯ ಮುಂದುವರೆಸಿದ್ದಾರೆ.

Trending News