J&K: ದಕ್ಷಿಣ ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರ ಹತ್ಯೆ

ದಕ್ಷಿಣ ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ನಾಲ್ಕು ಭಯೋತ್ಪಾದಕರು ಹತರಾಗಿದ್ದಾರೆ. ಕುಲ್ಗಮ್ ಮತ್ತು ಪುಲ್ವಾಮಾದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು.

Written by - Yashaswini V | Last Updated : Jul 8, 2021, 09:05 AM IST
  • ಪುಲ್ವಾಮಾ ಮತ್ತು ಕುಲ್ಗಂನಲ್ಲಿ ಪ್ರಮುಖ ಕ್ರಮ
  • ಪೊಲೀಸರು ಮತ್ತು ಸಿಆರ್‌ಪಿಎಫ್ ಜಂಟಿ ಕಾರ್ಯಾಚರಣೆ
  • ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರು ಕೊಲ್ಲಲ್ಪಟ್ಟರು
J&K: ದಕ್ಷಿಣ ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರ ಹತ್ಯೆ  title=
ದಕ್ಷಿಣ ಕಾಶ್ಮೀರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರ ಹತ್ಯೆ

ಪುಲ್ವಾಮಾ: ದಕ್ಷಿಣ ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ. ಪುಲ್ವಾಮಾದ ಪೂಚಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಉತ್ತಮ ಯಶಸ್ಸನ್ನು ಗಳಿಸಿವೆ.

ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದರು:
ಪೂಚಲ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು, 55 ಆರ್ಆರ್ ಮತ್ತು ಸಿಆರ್‌ಪಿಎಫ್ (CRPF) ತಂಡ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಭದ್ರತಾ ಪಡೆಗಳ ಜಂಟಿ ಶೋಧ ತಂಡವು ಅನುಮಾನಾಸ್ಪದ ಸ್ಥಳವನ್ನು ಸುತ್ತುವರಿದ ತಕ್ಷಣ, ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡಿನ ಸುರಿಮಳೆ ಗೈದಿದ್ದಾರೆ. ನಂತರ ಭದ್ರತಾ ಪಡೆಗಳು ಸಹ ಪ್ರತೀಕಾರ ತೀರಿಸಿಕೊಂಡವು  ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ- ಜಮ್ಮು ಬಳಿ ಮತ್ತೆ ಗೋಚರಿಸಿದ ಡ್ರೋನ್..! ಭದ್ರತಾಪಡೆಗಳಿಂದ ಕಣ್ಗಾವಲು

ಭಯೋತ್ಪಾದಕರಿಗೆ ಶರಣಾಗುವ ಅವಕಾಶ:
ಮೊದಲಿಗೆ ಭಯೋತ್ಪಾದಕರಿಗೆ ಶರಣಾಗುವಂತೆ ಅವಕಾಶ ನೀಡಲಾಯಿತು. ಆದರೆ ಅವರು ಅದನ್ನು ನಿರಾಕರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಕುಲ್ಗಂನಲ್ಲಿಯೂ ದೊಡ್ಡ ಕ್ರಮ:
ಐಜಿಪಿ ಕಾಶ್ಮೀರ (Jammu Kashmir) ವಿಜಯ್ ಕುಮಾರ್ ಅವರು ದಕ್ಷಿಣ ಕಾಶ್ಮೀರದ ಕುಲ್ಗಾಮ್ನಲ್ಲಿ ಇದೇ ರೀತಿಯ ಮತ್ತೊಂದು ಕಾರ್ಯಾಚರಣೆಯನ್ನು ನಡೆಸಿದ್ದಾರೆ, ಇದರಲ್ಲಿ ಇಬ್ಬರು ಲಷ್ಕರ್-ಎ-ತೈಬಾ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ- ಜಮ್ಮು-ಕಾಶ್ಮೀರದ ರಾಜ್‌ಪೊರಾದಲ್ಲಿ ಭದ್ರತಾ ಪಡೆ-ಭಯೋತ್ಪಾದಕರ ನಡವೆ ಘರ್ಷಣೆ - ಭಯೋತ್ಪಾದಕ ಹತ್ಯೆ

ನಾಲ್ವರು ಭಯೋತ್ಪಾದಕರ ಹತ್ಯೆಯ ನಂತರ, ಈ ವರ್ಷ ಕೊಲ್ಲಲ್ಪಟ್ಟ ಒಟ್ಟು ಭಯೋತ್ಪಾದಕರ ಸಂಖ್ಯೆ 71 ಕ್ಕೆ ಏರಿದೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News