Jobs: ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 41000 ಕ್ಕೂ ಹೆಚ್ಚು ಹುದ್ದೆಗಳು ಖಾಲಿ; ಇಲ್ಲಿದೆ ವಿವರ

Jobs: ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಟ್ಟು ಮಂಜೂರಾದ ಹುದ್ದೆಗಳ ಪೈಕಿ 41,177 ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದಾರೆ.

Written by - Yashaswini V | Last Updated : Dec 17, 2021, 02:28 PM IST
  • ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಟ್ಟು 41,177 ಹುದ್ದೆಗಳು ಖಾಲಿ
  • ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ (ಪಿಎಸ್‌ಬಿ) ಒಟ್ಟು 8,05,986 ಹುದ್ದೆಗಳನ್ನು ಮಂಜೂರು ಮಾಡಲಾಗಿದೆ
  • ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ಪೈಕಿ ಶೇ. 5ರಷ್ಟು ಹುದ್ದೆಗಳು ಇನ್ನೂ ಖಾಲಿ ಇವೆ
Jobs: ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 41000 ಕ್ಕೂ ಹೆಚ್ಚು ಹುದ್ದೆಗಳು ಖಾಲಿ; ಇಲ್ಲಿದೆ ವಿವರ title=
ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 41000 ಕ್ಕೂ ಹೆಚ್ಚು ಹುದ್ದೆಗಳು ಖಾಲಿ; ಇಲ್ಲಿದೆ ವಿವರ

Jobs: ಬ್ಯಾಂಕಿಂಗ್ ಉದ್ಯೋಗಗಳಿಗಾಗಿ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಶೀಘ್ರದಲ್ಲೇ ಬಂಪರ್ ಉದ್ಯೋಗಾವಕಾಶ ಇರಲಿದೆ. ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಟ್ಟು 41,177 ಹುದ್ದೆಗಳು ಖಾಲಿ ಇವೆ ಎಂದು ದೇಶದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಈ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 1ರವರೆಗೆ 41,177 ಅಥವಾ ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಮಂಜೂರಾದ ಹುದ್ದೆಗಳಲ್ಲಿ ಶೇ.5ರಷ್ಟು ಹುದ್ದೆಗಳು ಖಾಲಿ ಇವೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ (ಪಿಎಸ್‌ಬಿ) ಒಟ್ಟು 8,05,986 ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ಪೈಕಿ ಶೇ 5ರಷ್ಟು ಹುದ್ದೆಗಳು ಇನ್ನೂ ಖಾಲಿ ಇವೆ. ಈ ಎಲ್ಲಾ ಬ್ಯಾಂಕ್‌ಗಳಲ್ಲಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank Of India) ಗರಿಷ್ಠ 8,544 ಹುದ್ದೆಗಳನ್ನು ಹೊಂದಿದೆ. ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಉದ್ಯೋಗಿಗಳ ಕೊರತೆಯಿದ್ದು, ಇದರಿಂದ ಸರಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂಬುದು ಸರ್ಕಾರಕ್ಕೆ ತಿಳಿದಿದೆಯೇ ಎಂದು ಲೋಕಸಭೆಯಲ್ಲಿ ಕೇಂದ್ರ ಸಚಿವರಿಗೆ ಪ್ರಶ್ನೆ ಕೇಳಲಾಯಿತು. 

ಇದನ್ನೂ ಓದಿ-  ಡ್ರೈವಿಂಗ್ ಲೈಸೆನ್ಸ್ ಕಳೆದು ಹೋಗಿದೆಯೇ? ಮನೆಯಲ್ಲಿಯೇ ಕುಳಿತು ಡೂಪ್ಲಿಕೇಟ್ DL ಗಾಗಿ ಅರ್ಜಿ ಸಲ್ಲಿಸಿ, ಹಂತ-ಹಂತದ ಪ್ರಕ್ರಿಯೆ ಇಲ್ಲಿದೆ

ಇದಕ್ಕೆ ಪ್ರತಿಕ್ರಿಯಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman), ಡಿಸೆಂಬರ್ 1, 2021 ರವರೆಗಿನ ಅಂಕಿಅಂಶಗಳ ಪ್ರಕಾರ, ಸಾರ್ವಜನಿಕ ವಲಯದಲ್ಲಿ ಶೇಕಡಾ 95 ರಷ್ಟು ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಮತ್ತು ಕೇವಲ 5 ಶೇಕಡಾ ಹುದ್ದೆಗಳನ್ನು ಮಾತ್ರ ಭರ್ತಿ ಮಾಡಬೇಕಾಗಿದೆ. ಖಾಲಿ ಇರುವ ಹುದ್ದೆಗಳಿಗೆ ನಿವೃತ್ತಿಯೇ ಕಾರಣ ಎಂದು ಹೇಳಿದರು.  

ಇದನ್ನೂ ಓದಿ- Electric Vehicle Insurance: ಎಲೆಕ್ಟ್ರಿಕ್ ವಾಹನ ಖರೀದಿಸಲು ಯೋಜಿಸುತ್ತಿರುವಿರಾ? ವಿಮೆಗೆ ಸಂಬಂಧಿಸಿದ ಈ ನಿಯಮ ನಿಮಗೂ ಗೊತ್ತಿರಲಿ

ಒಟ್ಟು 12 PSB ಗಳಿರುವ ಪೋಸ್ಟ್‌ಗಳಲ್ಲಿ ಖಾಲಿ ಹುದ್ದೆಗಳಿವೆ . ಈ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿನ ಅಧಿಕಾರಿಗಳು, ಗುಮಾಸ್ತರು ಮತ್ತು ಉಪ-ಸಿಬ್ಬಂದಿಗಳ ಹುದ್ದೆಗಳು ಖಾಲಿ ಇವೆ. 
* ಎಸ್‌ಬಿಐನಲ್ಲಿ ಗರಿಷ್ಠ 8,544 ಹುದ್ದೆಗಳು ಖಾಲಿ ಇವೆ. 
* ಅದೇ ಸಮಯದಲ್ಲಿ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ (Punjab National Bank)  6,743 ಹುದ್ದೆಗಳು ಖಾಲಿ ಇವೆ. * ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (Central Bank of India)  6,295, ಇಂಡಿಯನ್ ಓವರ್ ಸೀಸ್ ಬ್ಯಾಂಕ್ (Indian Overseas Bank)  ನಲ್ಲಿ 5,112 ಮತ್ತು ಬ್ಯಾಂಕ್ ಆಫ್ ಇಂಡಿಯಾದಲ್ಲಿ (Bank of India)  4,848 ಹುದ್ದೆಗಳು ಖಾಲಿ ಇವೆ. 
* ಎಸ್‌ಬಿಐನಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳಲ್ಲಿ 3,423 ಹುದ್ದೆಗಳು ಅಧಿಕಾರಿ ಮತ್ತು 5,121 ಹುದ್ದೆಗಳು ಗುಮಾಸ್ತರ ಹುದ್ದೆಗಳಾಗಿವೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News