ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದೆ ಜೋತಿರಾದಿತ್ಯ ಸಿಂಧಿಯಾ

ಕಾಂಗ್ರೆಸ್ ಪಕ್ಷವು ಮಧ್ಯಪ್ರದೇಶದಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದೆ. ಪಕ್ಷದ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

Last Updated : Mar 10, 2020, 01:10 PM IST
ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದೆ ಜೋತಿರಾದಿತ್ಯ ಸಿಂಧಿಯಾ title=

ಕಾಂಗ್ರೆಸ್ ಪಕ್ಷವು ಮಧ್ಯಪ್ರದೇಶದಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದೆ. ಪಕ್ಷದ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಗಳವಾರ ಬೆಳಗ್ಗೆಯಿಂದ, ಈ ಬಗ್ಗೆ ಊಹಾಪೋಹಗಳು ಕೇಳಿ ಬಂದಿದ್ದು, ಸಿಂಧಿಯಾ ಇಂದು ಗಂಭೀರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯನ್ನು ವರ್ತಿಸಲಾಗಿತ್ತು. ಈ ಊಹಾಪೋಹಗಳಿಗೆ ತೆರೆ ಎಳೆದಿರುವ ಜೋತಿರಾದಿತ್ಯ ಸಿಂಧಿಯಾ, ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ತಮ್ಮ ರಾಜೀನಾಮ ಸಲ್ಲಿಸಿದ್ದಾರೆ.

ರಾಜೀನಾಮೆ ನೀಡುವುದಕ್ಕೂ ಮುನ್ನ ಜೋತಿರಾದಿತ್ಯ ಸಿಂಧಿಯಾ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ನಾಡು ನಂತರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದರು. ಈ ಸಭೆಯ ಬಳಿಕ ಸಿಂಧಿಯಾ ಇಂದು ಬಿಜೆಪಿಗೆ ಸೇರುವುದು ಬಹುತೇಕ ಖಚಿತವಾಗಿದೆ ಎಂಬ ಸುದ್ದಿಗಳು ಕೇಳಿಬಂದಿದ್ದವು. ಆದರೆ, ಇನ್ನೊಂದೆಡೆ  ಕಾಂಗ್ರೆಸ್ ಹೈಕಮಾಂಡ್ ಕೂಡ ನಿರಂತರವಾಗಿ ಸಿಂಧಿಯಾ ಅವರ ಮನವೊಲಿಸಲು ಪ್ರಯತ್ನಿಸುತ್ತಿತ್ತು. ಆದರೆ, ಈ ಎಲ್ಲ ರಾಜಕೀಯ ಘಟನಾವಳಿಗಳಿಗೆ ಅಂತ್ಯ ಹಾಡಿರುವ ಸಿಂಧಿಯಾ ಕೊನೆಗೂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ 18 ವರ್ಷಗಳಿಂದ ತಾವು ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸಿದ್ದು, ಇದೀಗ ಮುಂದುವರೆಯುವ ಅಗತ್ಯತೆ ಇದೆ ಎಂದು ಸಿಂಧಿಯಾ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Trending News