ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳುವ ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ.

Last Updated : Nov 6, 2020, 12:09 AM IST
ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳುವ ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ.

2020-21 ನೇ ಸಾಲಿನಲ್ಲಿ ಇಲಾಖೆಯ ಜಿಲ್ಲಾ ಕಛೇರಿಗಳಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಪರಿಶಿಷ್ಟ ಪಂಗಡದ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ಅಪ್ರೆಂಟಿಸ್‍ಗೆ ಮಾಹೆಯಾನ ರೂ. 15ಸಾವಿರ ಗಳ ಸ್ಟೈಫಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು.

ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಕನ್ನಡ ಭಾಷಾ ಬಳಕೆ ಬಗ್ಗೆ ಪರೀಕ್ಷಿಸಲಾಗುವುದು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.
ಅರ್ಜಿಯೊಂದಿಗೆ ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಸಲು ನವೆಂಬರ್ 10 ರ ವರೆಗೆ ಅವಧಿ ವಿಸ್ತರಿಸಲಾಗಿದೆ.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಆವರಣ ಧಾರವಾಡ ಕಚೇರಿಗೆ ಅಥವಾ ಕಚೇರಿಯ ದೂ:0836-2447469 ಅಥವಾ ಮೊ.ಸಂ.9480841236 ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Trending News