ವಿದ್ಯುತ್ ಕಡಿತಕ್ಕೆ ಬಿಜೆಪಿ ಕಾರಣ: ಮಧ್ಯಪ್ರದೇಶ ಸಿಎಂ ಕಮಲ್ ನಾಥ್

ವಿದ್ಯುತ್ ಉತ್ಪಾದನೆಯು ಮಧ್ಯಪ್ರದೇಶದ ವಿದ್ಯುತ್ ಬೇಡಿಕೆಗಿಂತ ಹೆಚ್ಚಾಗಿದೆ. ಆದರೆ ಹಿಂದಿನ ಸರ್ಕಾರ ವಿದ್ಯುತ್ ಕಡಿತಕ್ಕೆ ಕಾರಣ ಎಂದು ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ. 

Last Updated : Jun 6, 2019, 10:25 AM IST
ವಿದ್ಯುತ್ ಕಡಿತಕ್ಕೆ ಬಿಜೆಪಿ ಕಾರಣ: ಮಧ್ಯಪ್ರದೇಶ ಸಿಎಂ ಕಮಲ್ ನಾಥ್ title=
File Image

ಭೋಪಾಲ್: ಇತ್ತೀಚಿನ ದಿನಗಳಲ್ಲಿ ಮಧ್ಯಪ್ರದೇಶದ ಹಲವು ಭಾಗಗಳಲ್ಲಿ ವಿದ್ಯುತ್ ಕಡಿತಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ದಾಳಿ ನಡೆಸುತ್ತಿವೆ.  ಇದಕ್ಕೆ ಪ್ರತ್ಯುತ್ತರವಾಗಿ ಸ್ಥಳೀಯ ಪತ್ರಿಕೆಗಳ ಮೂಲಕ ಜಾಹಿತಾರು ನೀಡಿರುವ ಮುಖ್ಯಮಂತ್ರಿ ಕಮಲ್ ನಾಥ್, ಇದರಲ್ಲಿ ಅವರು ಪರೋಕ್ಷವಾಗಿ ಈ ವಿದ್ಯುತ್ ಕಡಿತಕ್ಕೆ ಕಾರಣವಾಗುವ ಸಮಸ್ಯೆಗಳನ್ನು ಸೃಷ್ಟಿಸಿರುವುದು ಭಾರತೀಯ ಜನತಾ ಪಕ್ಷ (ಬಿಜೆಪಿ) ಎಂದು ದೂಷಿಸಿದ್ದಾರೆ.

ಸ್ಥಳೀಯ ಪತ್ರಿಕೆಗಳಲ್ಲಿ ಸಿಎಂ ಕಮಲ್ ನಾಥ್ ಅವರಿಂದ ನೀಡಿರುವ ಜಾಹಿರಾತಿನ ಪ್ರಕಾರ, ಮಧ್ಯಪ್ರದೇಶದಲ್ಲಿ ಯಾವುದೇ ವಿದ್ಯುತ್ ಕೊರತೆಯಿಲ್ಲ ಆದರೆ ವಿದ್ಯುತ್ ಕಡಿತಕ್ಕೆ ಕಾರಣವಾಗುವ ಅಡಚಣೆಯನ್ನು ಸೃಷ್ಟಿಸಿರುವುದು ಬಿಜೆಪಿ ಎಂದು ಹೇಳಲಾಗಿದೆ. "ಕಳೆದ ಕೆಲವು ದಿನಗಳಿಂದ ರಾಜ್ಯದ ಜನತೆ ಎದುರಿಸುತ್ತಿರುವ ವಿದ್ಯುತ್ ಕಡಿತ ಸಮಸ್ಯೆಗೆ ವಿದ್ಯುತ್ ಕೊರತೆ ಕಾರಣವಲ್ಲ" ಎಂದು ಜಾಹೀರಾತುಗಳಲ್ಲಿ ಮುಖ್ಯಮಂತ್ರಿಗಳು ಹೇಳಿದ್ದಾರೆ. "ವಿದ್ಯುತ್ ಪೂರೈಕೆ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ಮಾಡಿಲ್ಲದ ಕಾರಣ, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ" ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯು ವಿದ್ಯುತ್ ಬೇಡಿಕೆಗಿಂತ ಹೆಚ್ಚಿದೆ ಎಂದು ಭರವಸೆ ನೀಡಿರುವ ಕಮಲ್ ನಾಥ್, ಹಿಂದಿನ ಸರ್ಕಾರ ವಿದ್ಯುತ್ ಪೂರೈಕೆಯಲ್ಲಿ ಸುಧಾರಣೆ ತರದ ಕಾರಣ ವಿದ್ಯುತ್ ಕಡಿತ ಸಮಸ್ಯೆ ಎದುರಿಸಬೇಕಾಗಿದೆ ಎಂದು ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರವನ್ನು ಪರೋಕ್ಷವಾಗಿ ದೂರಿದ್ದಾರೆ.

ವಿದ್ಯುತ್ ವ್ಯವಸ್ಥೆ ಸುಧಾರಿಸಲು ಸೂಚನೆ:
ಏತನ್ಮಧ್ಯೆ, ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಅವರು ವಿದ್ಯುತ್ ಪೂರೈಕೆಗಾಗಿ ವ್ಯವಸ್ಥೆಯನ್ನು ಸುಧಾರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜೊತೆಗೆ ಅನಗತ್ಯವಾಗಿ ವಿದ್ಯುತ್ ಕಡಿತ ಮಾಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದರಲ್ಲಿ ಯಾವುದೇ ಬೇಜವಾಬ್ದಾರಿ ಕಂಡು ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕಮಲ್ ನಾಥ್ ಎಚ್ಚರಿಸಿದ್ದಾರೆ.
 

Trending News