Hijab verdict:ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್‌ನ ನಿರ್ಧಾರದ ಬಗ್ಗೆ ಮೆಹಬೂಬಾ ಮುಫ್ತಿ ಹೇಳಿದ್ದೇನು!?

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್‌ ತೀರ್ಪಿನ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. 

Written by - Chetana Devarmani | Last Updated : Mar 15, 2022, 05:54 PM IST
  • ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ
  • "ಹಿಜಾಬ್ ನಿಷೇಧ ಎತ್ತಿಹಿಡಿಯುವ ನಿರ್ಧಾರವು ತೀವ್ರ ನಿರಾಶಾದಾಯಕವಾಗಿದೆ"
  • ಅಸಮಾಧಾನ ಹೊರಹಾಕಿದ ಮೆಹಬೂಬಾ ಮುಫ್ತಿ
Hijab verdict:ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್‌ನ ನಿರ್ಧಾರದ ಬಗ್ಗೆ ಮೆಹಬೂಬಾ ಮುಫ್ತಿ ಹೇಳಿದ್ದೇನು!? title=
ಮೆಹಬೂಬಾ ಮುಫ್ತಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ (Mehbooba Mufti) ಅವರು ಮಂಗಳವಾರ (ಮಾರ್ಚ್ 15, 2022) ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್‌ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. 

ಇದನ್ನೂ ಓದಿ: Karnataka Hijab Controversy: ಹಿಜಾಬ್ ವಿವಾದದಲ್ಲಿ HC ತೀರ್ಪಿನ ಕುರಿತು AIMIM ಮುಖ್ಯಸ್ಥ Asad 

"ಹಿಜಾಬ್ (Hijab) ನಿಷೇಧವನ್ನು ಎತ್ತಿಹಿಡಿಯುವ ಕರ್ನಾಟಕ ಹೈಕೋರ್ಟ್‌ನ ನಿರ್ಧಾರವು ತೀವ್ರ ನಿರಾಶಾದಾಯಕವಾಗಿದೆ. ಒಂದು ಕಡೆ ನಾವು ಮಹಿಳೆಯರ ಸಬಲೀಕರಣದ ಬಗ್ಗೆ ಮಾತನಾಡುತ್ತೇವೆ. ಆದರೆ ನಾವು ಅವರಿಗೆ ಸರಳ ಆಯ್ಕೆಯ ಹಕ್ಕನ್ನು ನಿರಾಕರಿಸುತ್ತಿದ್ದೇವೆ" ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ. 

ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಾಯಕ ಒಮರ್ ಅಬ್ದುಲ್ಲಾ (Omar Abdullah) ಕೂಡ ಈ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.  "ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿನಿಂದ ತುಂಬಾ ನಿರಾಶೆಯಾಗಿದೆ" ಎಂದು ಮಾಜಿ ಜೆ & ಕೆ ಸಿಎಂ ಒಮರ್ ಅಬ್ದುಲ್ಲಾ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಲ್ಲ, ಆದರೆ ಎಲ್ಲಾ ನಿರ್ಧಾರ ತೆಗೆದುಕೊಳ್ಳುತ್ತಾರೆ'

ತರಗತಿಯೊಳಗೆ ಹಿಜಾಬ್ (Hijab Verdict) ಧರಿಸಲು ಅನುಮತಿ ಕೋರಿ ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರ ವಿಭಾಗವು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ವಜಾಗೊಳಿಸಿದ ಕೆಲವೇ ನಿಮಿಷಗಳಲ್ಲಿ ಈ ಪ್ರತಿಕ್ರಿಯೆಗಳು ಬಂದಿವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News