Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!

Karnataka Weather: ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಸೇರಿದಂತೆ ಇನ್ನೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಅಂತಾ ವರದಿಯಾಗಿದೆ. 

Written by - Puttaraj K Alur | Last Updated : Apr 23, 2024, 05:36 PM IST
  • ಕರ್ನಾಟಕದ ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ
  • ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿಯಲ್ಲೂ ಮಳೆ ಸಾಧ್ಯತೆ
  • ರಾಯಚೂರಿನಲ್ಲಿ 41.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ
Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ! title=
Karnataka weather forecast

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಸೇರಿದಂತೆ ಇನ್ನೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಅಂತಾ ವರದಿಯಾಗಿದೆ. 

ಇದನ್ನೂ ಓದಿ: Daily GK Quiz: ಪ್ರಿಂಟಿಂಗ್ ಪ್ರೆಸ್ ಅನ್ನು ಕಂಡುಹಿಡಿದವರು ಯಾರು?

ಬೆಳಗಾವಿ ಮತ್ತು ಹಾವೇರಿಯ ವಿವಿಧ ಭಾಗಗಳಲ್ಲಿ ಸೋಮವಾರ ಕೊಂಚ ಮಳೆಯಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. HAL​ನಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, KIAL​ನಲ್ಲಿ 37.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, GKVKಯಲ್ಲಿ 35.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದಲ್ಲಿಯೇ ರಾಯಚೂರಿನಲ್ಲಿ 41.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿರುವುದು ವರದಿಯಾಗಿದೆ. ಬಿಸಲಿನಿಂದ ತತ್ತರಿಸಿ ಹೋಗಿರುವ ರಾಜ್ಯದ ಜನತೆಗೆ ವರುಣ ಕೃಪೆ ತೋರಲಿದ್ದಾನೆ. ಮಳೆರಾಯನ ಆಗಮನವು ಇಳೆಗೆ ತಂಪು ನೀಡಲಿದೆ.  

ಇದನ್ನೂ ಓದಿ: 4 ವರ್ಷದ ಪದವಿ, 75% ಅಂಕಗಳನ್ನು ಹೊಂದಿರುವ ವಿದ್ಯಾರ್ಥಿಗಳು ನೇರವಾಗಿ ಪಿಎಚ್‌ಡಿ : ಯುಜಿಸಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News