ಕರುಣಾನಿಧಿ ಆರೋಗ್ಯ ಸ್ಥಿರವಾಗಿದೆ- ವೈದ್ಯರ ಸ್ಪಷ್ಟನೆ

ಜ್ವರ ಮತ್ತು ಮೂತ್ರ ಸೋಂಕಿನಿಂದ ಬಳಲುತ್ತಿರುವ ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ.  

Last Updated : Jul 30, 2018, 07:45 AM IST
ಕರುಣಾನಿಧಿ ಆರೋಗ್ಯ ಸ್ಥಿರವಾಗಿದೆ- ವೈದ್ಯರ ಸ್ಪಷ್ಟನೆ title=

ಚೆನ್ನೈ: ಜ್ವರ ಮತ್ತು ಮೂತ್ರ ಸೋಂಕಿನಿಂದ ಬಳಲುತ್ತಿರುವ ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರಿಗೆ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಮತ್ತು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕಾವೇರಿ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ. 

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕಾವೇರಿ ಆಸ್ಪತ್ರೆ ಮಾಜಿ ಸಿಎಂ ಎಂ. ಕರುಣಾನಿಧಿ ಅವರು ಚಿಕಿತ್ಸೆಗೆ ಸ್ಪಂಧಿಸುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ ಸುಧಾರಿಸುತ್ತಿದೆ ಎಂದು ತಿಳಿಸಿದೆ.

ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆತಂಕಗೊಂಡ ಡಿಎಂಕೆ ಕಾರ್ಯಕರ್ತರು ಭಾನುವಾರ ಸಂಜೆ ಅಪಾರ ಪ್ರಮಾಣದಲ್ಲಿ ಆಸ್ಪತ್ರೆಯ ಮುಂದೆ ಜಮಾಯಿಸಿದ್ದರು. ಭಾನುವಾರ ರಾತ್ರಿ ಆಸ್ಪತ್ರೆಯ ಹೊರಗೆ ನೂರಾರು ಜನ ಅಭಿಮಾನಿಗಳು ಜಮಾಯಿಸಿದ್ದರಿಂದ ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದರು.

ಕಳೆದ ಮೂರು ದಿನಗಳಿಂದ ನಾವು ನೀರು, ಆಹಾರ ಬಿಟ್ಟು ಇಲ್ಲಿ ಕಾಯುತ್ತಿದ್ದೇವೆ. ನಮಗೆ ತಲೈವಾ ಬೇಕು. ಅವರ ಬಗ್ಗೆ ಯಾವುದೇ ಮಾಹಿತಿಯನ್ನು ಯಾಕೆ ನೀಡುತ್ತಿಲ್ಲ? ನಮಗೆ ಅವರು ಬೇಕು ಎಂದು ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಅಭಿಮಾನಿಯೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.

Trending News