ಕೊಚ್ಚಿ: ಕೊಚ್ಚಿನ್ ಅಂತರರಾಷ್ಟ್ರೀಯ ವಿಮಾನನಿಲ್ದಾಣವು ಆಗಸ್ಟ್ 18 ರವರೆಗೆ (ಶನಿವಾರ) ನಾಲ್ಕು ದಿನಗಳ ಕಾಲ ವಿಮಾನ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ವಿಮಾನ ನಿಲ್ದಾಣದ ಸಮೀಪವಿರುವ ಚೆಂಗಲ್ತೋಡು ಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಕೊಚ್ಚಿ ವಿಮಾನನಿಲ್ದಾಣದಲ್ಲಿ ಆಗಸ್ಟ್ 18 ರ ಶನಿವಾರ ಮಧ್ಯಾಹ್ನ 2 ಗಂಟೆವರೆಗೆ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಘೋಷಿಸಿದೆ.
ಮೊದಲಿಗೆ ವಿಮಾನ ನಿಲ್ಧಾಣದ ಅಧಿಕಾರಿಗಳು ಬುಧವಾರ ಮಧ್ಯಾಹ್ನ 2 ಗಂಟೆವರೆಗೆ ವಿಮಾನ ಹಾರಾಟ ಸ್ಥಗಿತಗೊಳಿಸಲು ನಿರ್ಧರಿಸಿದ್ದರು. ಆದರೆ ನಂತರ ಆಗಸ್ಟ್ 18 ರ ಶನಿವಾರ ಮಧ್ಯಾಹ್ನ 2 ಗಂಟೆವರೆಗೆ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.
ಇಡುಕ್ಕಿ ಡ್ಯಾಂನ ಎರಡು ಆಣೆಕಟ್ಟುಗಳಿಂದ ಮಂಗಳವಾರ ಹೆಚ್ಚುವರಿ ನೀರು ಬಿಡುಗಡೆ ಮಾಡಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.