ಅರುಣಾಚಲ ಪ್ರದೇಶದಲ್ಲಿ ಭೂಕುಸಿತ: ಇಬ್ಬರಿಗೆ ಗಾಯ, ಓರ್ವ ಸಿಲುಕಿರುವ ಶಂಕೆ

ಭೂಕುಸಿತದಿಂದಾಗಿ ಹಲವು ವಾಹನಗಳು ಜಖಂ ಆಗಿದ್ದು, ಈ ಪ್ರದೇಶದಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದಾಗಿ ಮುಂದಿನ ದಿನಗಳಲ್ಲಿ ಭೂಕುಸಿತದಂತಹ ಘಟನೆಗಳು ಹೆಚ್ಚಾಗಲಿವೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ. 

Last Updated : Jul 17, 2019, 02:16 PM IST
ಅರುಣಾಚಲ ಪ್ರದೇಶದಲ್ಲಿ ಭೂಕುಸಿತ: ಇಬ್ಬರಿಗೆ ಗಾಯ, ಓರ್ವ ಸಿಲುಕಿರುವ ಶಂಕೆ title=
Pic Courtesy: ANI

ಇಟಾನಗರ: ಅರುಣಾಚಲ ಪ್ರದೇಶದಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಬುಧವಾರ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಗಾಯಗೊಂಡಿದ್ದು, ಓರ್ವ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 415 ರಲ್ಲಿ ರಸ್ತೆ ಸಂಚಾರ ನಿಷೇಧಿಸಲಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಯಾ ತಂಡಗಳು ಈ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. 

ಭೂಕುಸಿತದಿಂದಾಗಿ ಹಲವು ವಾಹನಗಳು ಜಖಂ ಆಗಿದ್ದು, ಈ ಪ್ರದೇಶದಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದಾಗಿ ಮುಂದಿನ ದಿನಗಳಲ್ಲಿ ಭೂಕುಸಿತದಂತಹ ಘಟನೆಗಳು ಹೆಚ್ಚಾಗಲಿವೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ. 

ವರದಿಗಳ ಪ್ರಕಾರ, ಅರುಣಾಚಲ ಪ್ರದೇಶದಲ್ಲಿ ಮಳೆಯಿಂದಾಗಿ ಗೋಡೆ ಕುಸಿದ ಪರಿಣಾಮ ಸುಮಾರು 7 ಮನೆಗಳು ಹಾನಿಗೊಳಗಾಗಿದ್ದವು. ಅಲ್ಲದೆ, ವಿವೇಕ್ ವಿಹಾರ್‌ನ ಡಿಎನ್‌ಜಿಸಿ ಬಳಿ ಮತ್ತೊಂದು ಮನೆ ಮತ್ತು ಲೋವರ್ ರಾಕಾಪ್ ಕಾಲೋನಿ ಬಳಿ ಎರಡು ಮನೆಗಳು ಹಾನಿಗೀಡಾಗಿವೆ. 

Trending News