ಲತಾ ಮಂಗೇಶ್ಕರ್ ನಿಧನಕ್ಕೆ ಎರಡು ದಿನಗಳ ರಾಷ್ಟ್ರೀಯ ಶೋಕ

ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಕೇಂದ್ರ ಸರ್ಕಾರ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಈ ಸಂದರ್ಭದಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಅರ್ಧ ಹಾರಿಸಲಾಗುವುದು.

Written by - Ranjitha R K | Last Updated : Feb 6, 2022, 02:00 PM IST
  • ಲತಾ ಮಂಗೇಶ್ಕರ್ ಮುಂಬೈನಲ್ಲಿ ನಿಧನ
  • ಲತಾ ಮಂಗೇಶ್ಕರ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗಿತ್ತು
  • ಲತಾ ಮಂಗೇಶ್ಕರ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ಲತಾ ಮಂಗೇಶ್ಕರ್ ನಿಧನಕ್ಕೆ ಎರಡು ದಿನಗಳ ರಾಷ್ಟ್ರೀಯ ಶೋಕ  title=
ಲತಾ ಮಂಗೇಶ್ಕರ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ (file photo)

ನವದೆಹಲಿ : ಗಾನ ಕೋಗಿಲೆ  ಲತಾ ಮಂಗೇಶ್ಕರ್ (Lata Mangeshkar)  ಇಂದು  ಮುಂಬೈನಲ್ಲಿ ನಿಧನರಾಗಿದ್ದಾರೆ.  ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಕೇಂದ್ರ ಸರ್ಕಾರ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು (Two Day National Mourning) ಘೋಷಿಸಿದೆ. ಈ ಸಂದರ್ಭದಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಅರ್ಧ ಹಾರಿಸಲಾಗುವುದು. 

ಭಾರತದಲ್ಲಿ 2 ದಿನಗಳ ರಾಷ್ಟ್ರೀಯ ಶೋಕಾಚರಣೆ :
ಭಾರತ ರತ್ನ ಲತಾ ಮಂಗೇಶ್ಕರ್ (Lata Mangeshkar)  ಅವರ ನಿಧನದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ 2 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು (National Mourning) ಘೋಷಿಸಿದೆ. ರಾಷ್ಟ್ರೀಯ ಶೋಕಾಚರಣೆಯನ್ನು ಫೆಬ್ರವರಿ 6 ಮತ್ತು 7 ಫೆಬ್ರವರಿ 2022 ರಂದು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ದೇಶದಾದ್ಯಂತ ತ್ರಿವರ್ಣ ಧ್ವಜವನ್ನು ಅರ್ಧ ಮಾತ್ರ ಹಾರಿಸಲಾಗುವುದು.

national mourning

ಇದನ್ನೂ ಓದಿ : Lata Mangeshkar: ಗಾಯನ ನಿಲ್ಲಿಸಿದ ಭಾರತ ರತ್ನ ಲತಾ ಮಂಗೇಶ್ಕರ್

ಪ್ರಧಾನಿ ಸಂತಾಪ :
ಲತಾ ಮಂಗೇಶ್ಕರ್ ನಿಧನಕ್ಕೆ ಪ್ರಧಾನಿ ಮೋದಿ (PM Modi) ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ (Narendra Modi), 'ಲತಾ ದೀದಿ ಅವರಿಂದ  ಯಾವಾಗಲೂ ನಾನು ಅಪಾರ ಪ್ರೀತಿಯನ್ನು ಪಡೆದಿರುವುದು ಗೌರವದ ವಿಚಾರ ಎಂದಿದ್ದಾರೆ.  ಅವರೊಂದಿಗಿನ ನನ್ನ ಸಂಭಾಷಣೆ ಅವಿಸ್ಮರಣೀಯವಾಗಿರುತ್ತದೆ ಎಂದು ಹೇಳಿದ್ದಾರೆ. 

 

 50 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಲತಾ ಮಂಗೇಶ್ಕರ್ :
ಭಾರತ ರತ್ನ ಲತಾ ಮಂಗೇಶ್ಕರ್ ಅವರು ಕಲಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಅವರು 50 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿ  ಜನಮನ ಗೆದ್ದಿದ್ದಾರೆ. ಇದೀಗ ಲತಾ ಮಂಗೇಶ್ಕರ್ ನಿಧನದ ಸುದ್ದಿ ಅವರ ಅಭಿಮಾನಿಗಳನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. 

ಇದನ್ನೂ ಓದಿ : BARC Recruitment 2022: ಗ್ರೂಪ್ ಎ ಹುದ್ದೆಗಳಿಗೆ ವೃತ್ತಿಪರರ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ  ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News