TCS, Infosys ಕ್ಯಾಂಪಸ್‌ಗಳ ಬಳಿ ಚಿರತೆ ಪ್ರತ್ಯಕ್ಷ; ಅರಣ್ಯ ಇಲಾಖೆಯಿಂದ ಶೋಧ!

Leopard spotted near TCS, Infosys campuses: ಕ್ಯಾಂಪಸ್‌ಗಳಿರುವ ಸೂಪರ್ ಕಾರಿಡಾರ್ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ 11ರಿಂದ ಮಧ್ಯಾಹ್ನ 12ರ ನಡುವೆ ಚಿರತೆ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ರಕ್ಷಣಾ ತಂಡವು ಪ್ರಸ್ತುತ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Written by - Puttaraj K Alur | Last Updated : Jan 16, 2024, 04:57 PM IST
  • ಮಧ್ಯಪ್ರದೇಶದ ಇಂದೋರ್‌ನ TCS, Infosys ಕ್ಯಾಂಪಸ್‍ನಲ್ಲಿ ಚಿರತೆ ಪ್ರತ್ಯಕ್ಷ
  • ಅರಣ್ಯ ಇಲಾಖೆಯ ರಕ್ಷಣಾ ತಂಡದಿಂದ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಶೋಧ ಕಾರ್ಯಾಚರಣೆ
  • ತಮ್ಮ ಕಚೇರಿಗಳಿಂದ ಹೊರಗೆ ಹೋಗದಂತೆ ಎರಡೂ ಐಟಿ ಕಂಪನಿಗಳ ಉದ್ಯೋಗಿಗಳಿಗೆ ಎಚ್ಚರಿಕೆ
TCS, Infosys ಕ್ಯಾಂಪಸ್‌ಗಳ ಬಳಿ ಚಿರತೆ ಪ್ರತ್ಯಕ್ಷ; ಅರಣ್ಯ ಇಲಾಖೆಯಿಂದ ಶೋಧ! title=
TCS, Infosys ಕ್ಯಾಂಪಸ್‍ನಲ್ಲಿ ಚಿರತೆ ಪ್ರತ್ಯಕ್ಷ!

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ಟಿಸಿಎಸ್ ಮತ್ತು ಇನ್ಫೋಸಿಸ್ ಕ್ಯಾಂಪಸ್‌ಗಳ ಬಳಿ ಮಂಗಳವಾರ ಚಿರತೆಯೊಂದು ಕಾಣಿಸಿಕೊಂಡಿದ್ದು, ಆತಂಕ ಮೂಡಿಸಿದೆ. ಚಿರತೆಯನ್ನು ರಕ್ಷಿಸಲು ಅರಣ್ಯ ಇಲಾಖೆ ಸಿಬ್ಬಂದಿಯಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ಯಾಂಪಸ್‌ಗಳಿರುವ ಸೂಪರ್ ಕಾರಿಡಾರ್ ಪ್ರದೇಶದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 12ರ ನಡುವೆ ಚಿರತೆ ಕಾಣಿಸಿಕೊಂಡಿದೆ. ಅರಣ್ಯ ಇಲಾಖೆಯ ರಕ್ಷಣಾ ತಂಡವು ಪ್ರಸ್ತುತ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಶೋಧ ನಡೆಸುತ್ತಿದೆ. ರಕ್ಷಣಾ ಕಾರ್ಯಾಚರಣೆ ಮುಗಿಯುವವರೆಗೆ ಎರಡೂ ಐಟಿ ಕಂಪನಿಗಳ ಉದ್ಯೋಗಿಗಳು ತಮ್ಮ ಕಚೇರಿಗಳಿಂದ ಹೊರಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Ayodhya : ಅಯೋಧ್ಯೆಯಲ್ಲಿ ರಾಮ ಮಂದಿರದ ಬಳಿ ಕಾಂಗ್ರೆಸ್ ಮುಖಂಡರ ಮೇಲೆ ಹಲ್ಲೆ.!

ಈ ಬಗ್ಗೆ ಮಾತನಾಡಿರುವ ಇಂದೋರ್ ವಿಭಾಗೀಯ ಅರಣ್ಯ ಅಧಿಕಾರಿ (DFO) ಎಂ.ಎಸ್.ಸೋಲಂಕಿ, ‘ಸೂಪರ್ ಕಾರಿಡಾರ್ ಪ್ರದೇಶದಲ್ಲಿನ ಟಿಸಿಎಸ್ ಮತ್ತು ಇನ್ಫೋಸಿಸ್ ಕ್ಯಾಂಪಸ್‌ಗಳ ಬಳಿ ಚಿರತೆ ಕಾಣಿಸಿಕೊಂಡಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ನಾವು ರಕ್ಷಣಾ ತಂಡವನ್ನು ಕಳುಹಿಸಿದ್ದೇವೆ ಮತ್ತು ಚಿರತೆಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಹೇಳಿದ್ದಾರೆ. 

TCS ಮತ್ತು Infosys ನಗರದ ಸೂಪರ್ ಕಾರಿಡಾರ್ ಪ್ರದೇಶದಲ್ಲಿ ವಿಶೇಷ ಆರ್ಥಿಕ ವಲಯಗಳನ್ನು (SEZ) ನಡೆಸುತ್ತವೆ ಮತ್ತು ಇವುಗಳ ಕ್ಯಾಂಪಸ್‌ಗಳು ಪರಸ್ಪರ ಪಕ್ಕದಲ್ಲಿವೆ. ಇದೇ ಪ್ರದೇಶದಲ್ಲಿ ಇದೀಗ ಚಿರತೆ ಕಾಣಿಸಿಕೊಂಡಿದ್ದು, ಆತಂಕ ಮೂಡಿಸಿದೆ.

ಇದನ್ನೂ ಓದಿ: Ram Mandir: ಭವ್ಯ ಶ್ರೀರಾಮ ಮಂದಿರದ ಗರ್ಭಗುಡಿಯ ಚಿನ್ನದ ಬಾಗಿಲು ಪೂರ್ಣ: ಎಷ್ಟೊಂದು ಅದ್ಭುತವಾಗಿದೆ ನೋಡಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News