ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಆಗಸ್ಟ್ 31ರಂದು ಸಾರ್ವತ್ರಿಕ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.
ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾನಗರ ಪಾಲಿಕೆಗಳ ಚುನಾವಣೆ ಆ.31 ನಡೆಯಲಿದ್ದು, ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಸರ್ಕಾರಿ ಸ್ವಾಮ್ಯದ ಅಂಗಸಂಸ್ಥೆಗಳಿಗೆ ಒಂದು ದಿನದ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಆಗಸ್ಟ್ 31 ರಂದು ರಾಜ್ಯದ 21 ಜಿಲ್ಲೆಗಳ 102 ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ 3 ಮಹಾನಗರ ಪಾಲಿಕೆಗೆ ಚುನಾವಣೆ ನಡೆಯಲಿದೆ.