ಲೋಕಸಭಾ ಚುನಾವಣೆ 2019: ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

Last Updated : Apr 26, 2019, 12:48 PM IST
ಲೋಕಸಭಾ ಚುನಾವಣೆ 2019: ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ title=

ವಾರಣಾಸಿ: ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶುಕ್ರವಾರ ಬೆಳಿಗ್ಗೆ 11.45ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. 

ಎನ್ಡಿಎ ಮೈತ್ರಿಕೂಟದ ಹಿರಿಯ ನಾಯಕರಾದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನಾ ಮುಖ್ಯಸ್ಥೆ ಉದ್ಭವ್ ಠಾಕ್ರೆ, ಎಲ್ ಜೆಪಿ ನಾಯಕ ರಾಮ್ ವಿಲಾಸ್ ಪಾಶ್ವಾನ್, ಶಿರೋಮಣಿ ಅಕಾಲಿ ದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ ಸೇರಿದಂತೆ ಬಿಜೆಪಿ ನಾಯಕರಾದ ಸೇರಿದಂತೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ಶುಭ ಹಾರೈಸಿದರು.

Trending News