ಲೋಕಸಭೆ ಚುನಾವಣೆ : ಧಾರ್ಮಿಕ ಸ್ಥಳಗಳಲ್ಲಿ ರಾಜಕೀಯ ಚಟುವಟಿಕೆಗಳಿಗೆ ನಿರ್ಬಂಧ

ಶನಿವಾರ ಮಾರ್ಚ್ 16 ರಂದು ಲೋಕಸಭೆ ಚುನಾವಣೆ 2024ರ ವೇಳಾಪಟ್ಟಿ ಘೋಷಣೆಯಾಗಿದ್ದು, ಚುನಾವಣೆ ವೇಳಾಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಧಾರ್ಮಿಕ ಸ್ಥಳಗಳಲ್ಲಿ ರಾಜಕೀಯ ಚಟುವಟಿಕೆಗಳ ನಿರ್ಬಂಧ ಹೇರಿದೆ.

Written by - Zee Kannada News Desk | Last Updated : Mar 17, 2024, 02:52 PM IST
  • ಚುನಾವಣೆ ವೇಳಾಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಧಾರ್ಮಿಕ ಸ್ಥಳಗಳಲ್ಲಿ ರಾಜಕೀಯ ಚಟುವಟಿಕೆಗಳ ನಿರ್ಬಂಧ ಹೇರಿದೆ.
  • ರಾಜಕೀಯ ಚಟುವಟಿಕೆಗಳಿಗೆ ದೇವಾಲಯದ ಕೊಠಡಿಗಳು, ಕಲ್ಯಾಣ ಮಂಟಪ, ಸಮುದಾಯದ ಭವನ, ಖಾಲಿ ಜಾಗ, ದೇವಾಲಯದ ಆವರಣ, ಇತರೆ ಧಾರ್ಮಿಕ ಸ್ಥಳಗಳನ್ನು ನೀಡಲು ಅವಕಾಶ ಇರುವುದಿಲ್ಲ.
  • ಚುನಾವಣೆ ವೇಳಾಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಧಾರ್ಮಿಕ ಸ್ಥಳಗಳಲ್ಲಿ ರಾಜಕೀಯ ಚಟುವಟಿಕೆಗಳ ನಿರ್ಬಂಧ ಹೇರಿದೆ.
ಲೋಕಸಭೆ ಚುನಾವಣೆ : ಧಾರ್ಮಿಕ ಸ್ಥಳಗಳಲ್ಲಿ ರಾಜಕೀಯ ಚಟುವಟಿಕೆಗಳಿಗೆ ನಿರ್ಬಂಧ  title=

Lok Sabha  Elections :  :ಮಾರ್ಚ್ 16 ರಂದು ಲೋಕಸಭೆ ಚುನಾವಣೆ 2024ರ ವೇಳಾಪಟ್ಟಿ ಶನಿವಾರ ಘೋಷಣೆಯಾಗಿದೆ. ತಕ್ಷಣದಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಕರ್ನಾಟಕದ 28 ಎರಡು ಹಂತದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದೆ. ಚುನಾವಣಾ ಫಲಿತಾಂಶ ಜೂನ್ 4ರಂದು ಪ್ರಕಟವಾಗಲಿದೆ.

ಚುನಾವಣೆ ವೇಳಾಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಧಾರ್ಮಿಕ ಸ್ಥಳಗಳಲ್ಲಿ ರಾಜಕೀಯ ಚಟುವಟಿಕೆಗಳ ನಿರ್ಬಂಧ ಹೇರಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆ ಇಲಾಖೆಗೆ ಒಳಪಡುವ ಎಲ್ಲಾ ದೇವಾಲಯ, ಮಠ, ಧಾರ್ಮಿಕ ಸಂಸ್ಥೆಗಳು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ರಾಜಕೀಯ ಚಟುವಟಿಕೆಗಳಿಗೆ ನಿರ್ಬಂಧ ಹೇರಿದೆ.

ಇದನ್ನು ಓದಿ : ICAI  : ಮೇ ತಿಂಗಳಲ್ಲಿ ನಡೆಯಬೇಕಿದ್ದ 2024ರ ಸಿಎ ಪರೀಕ್ಷೆ ಮುಂದೂಡಿಕೆ : ಮಾಹಿತಿ ಇಲ್ಲಿದೆ

ಲೋಕಸಭಾ ಚುನಾವಣೆ-2024 ಅನ್ನು ಶಾಂತಿಯುತ ಹಾಗೂ ಮುಕ್ತವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆ ಹೇಳಿದೆ. ಯಾವ ಯಾವ ರಾಜಕೀಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದು ಇಲಾಖೆ ಪಟ್ಟಿ ನೀಡಿದೆ.

ಚಟುವಟಿಕೆಗಳಿಗೆ ನಿರ್ಬಂಧ : 
ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯ, ಮಠ, ಮಂದಿರ, ಜೈನ ಬಸದಿಗಳು ಹಾಗೂ ಇವುಗಳ ವ್ಯಾಪ್ತಿಗೆ ಒಳಪಡುವ ಭವನ, ಯಾತ್ರಿ ನಿವಾಸ ಪ್ರದೇಶ, ಕಲ್ಯಾಣ ಮಂಟಪಗಳಲ್ಲಿ ಸಭೆ, ಸಮಾರಂಭ ಅಥವಾ ಇನ್ನಿತರ ರಾಜಕೀಯ ಚಟುವಟಿಕೆಗಳ ಆಯೋಜನೆಗೆ ಅನುಮತಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. 

ಇದನ್ನು ಓದಿ : ಈಶ್ವರಪ್ಪ ಮನವೊಲಿಕೆ ಆಗುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ  

ದೇವಾಲಯಗಳಲ್ಲಿ ವ್ಯಕ್ತಿಗಳು ಯಾವುದೇ ಸಮಾರಂಭ, ಸಭೆ, ಇನ್ನಿತರ ರಾಜಕೀಯ ಚಟುವಟಿಕೆಗಳು ನಡೆಸುವಂತಿಲ್ಲ. ದೇವಾಲಯದ ಆವರಣದಲ್ಲಿ ರಾಜಕೀಯ ವ್ಯಕ್ತಿಗಳಿಂದ ಅನವಶ್ಯಕ ಕಾರ್ಯಕ್ರಮದ ಆಯೋಜನೆಯಲ್ಲಿ ಊಟದ ವ್ಯವಸ್ಥೆ ಮಾಡುವಂತಿಲ್ಲ. ದೇವಸ್ಥಾನದ ಧ್ವನಿವರ್ಧಕಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸುವಂತಿಲ್ಲ.ರಾಜಕೀಯ ಚಟುವಟಿಕೆಗಳಿಗೆ ದೇವಾಲಯದ ಕೊಠಡಿಗಳು, ಕಲ್ಯಾಣ ಮಂಟಪ, ಸಮುದಾಯದ ಭವನ, ಖಾಲಿ ಜಾಗ, ದೇವಾಲಯದ ಆವರಣ, ಇತರೆ ಧಾರ್ಮಿಕ ಸ್ಥಳಗಳನ್ನು ನೀಡಲು ಅವಕಾಶ ಇರುವುದಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News