Lokshabha Elections 2024: 2024ರ ಲೋಕಸಭಾ ಚುನಾವಣೆಯು ಅಂತಿಮ ಘಟ್ಟವನ್ನು ತಲುಪಿದ್ದು, ನಾಳೆ ಅಂದರೆ ಶನಿವಾರ (ಜೂನ್ 1) ಕೊನೆಯ ಹಂತದ ಮತದಾನ ನಡೆಯಲಿದೆ. 8 ರಾಜ್ಯಗಳ 57 ಸ್ಥಾನಗಳಿಗೆ ಕೊನೆಯ ಮತ್ತು 7ನೇ ಹಂತದ ಮತದಾನ ನಡೆಯಲಿದೆ.
ಪಂಜಾಬ್‌ನ 13, ಉತ್ತರ ಪ್ರದೇಶದ 13, ಬಂಗಾಳದ 9, ಬಿಹಾರದ 8, ಒಡಿಶಾದ 6, ಹಿಮಾಚಲದ 4, ಜಾರ್ಖಂಡ್‌ನ 3 ಮತ್ತು ಚಂಡೀಘಡದ ಒಂದು ಸ್ಥಾನಕ್ಕೆ ಶನಿವಾರ ಮತದಾನವು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ನಟಿ ಕಂಗನಾ ರಣಾವತ್, ಕೇಂದ್ರ ಸಚಿವ ಅನುರಾಗ್ ಠಾಕೂರ್, ಬಿಜೆಪಿ ಹಿರಿಯ ನಾಯಕ ರವಿಶಂಕರ್ ಪ್ರಸಾದ್ ಸೇರಿ ಹಲವು ಪ್ರಮುಖರ ಭವಿಷ್ಯ ನಿರ್ಧಾರವಾಗಲಿದೆ.
ಇದನ್ನೂ ಓದಿ: Photos: ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಧ್ಯಾನ ಆರಂಭಿಸಿದ ಪ್ರಧಾನಿ ಮೋದಿ
1,100 ಕೋಟಿ ರೂ. ನಗದು & ಚಿನ್ನಾಭರಣ ಸೀಜ್!
ಲೋಕಸಭೆಯ 7 ಹಂತಗಳ ಚುನಾವಣೆ ವೇಳೆ ದೇಶದ ವಿವಿಧೆಡೆ ದಾಳಿ ನಡೆಸಿದ್ದ ಐಟಿ ಇಲಾಖೆ ಅಧಿಕಾರಿಗಳು ಬರೋಬ್ಬರಿ 1,100 ಕೋಟಿ ರೂ. ನಗದು ಮತ್ತು ಚಿನ್ನಾಭರಣವನ್ನು ಸೀಜ್ ಮಾಡಿದ್ದಾರೆ. 2019ರ ಚುನಾವಣೆಯಲ್ಲಿ ಐಟಿ ಇಲಾಖೆ ಒಟ್ಟು 390 ಕೋಟಿ ರೂ.ವನ್ನು ಸೀಜ್ ಮಾಡಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ವಶಕ್ಕೆ ಪಡೆದ ಪ್ರಮಾಣ ಶೇ.182 ರಷ್ಟು ಹೆಚ್ಚಾಗಿದೆ. ದೆಹಲಿ ಮತ್ತು ಕರ್ನಾಟಕದಲ್ಲೇ ಅತಿಹೆಚ್ಚು ಅಂದರೆ 200 ಕೋಟಿಗೂ ಹೆಚ್ಚು ಮೌಲ್ಯದ ನಗದು ಮತ್ತು ಆಭರಣವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ನಂತರದ ಸ್ಥಾನಗಳಲ್ಲಿ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಒಡಿಶಾ ರಾಜ್ಯಗಳಿವೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಶನಿವಾರ ಸಂಜೆ ಎಕ್ಸಿಟ್ ಪೋಲ್!
ಲೋಕಸಭಾ ಚುನಾವಣೆಯ 7ನೇ ಹಂತದ ಮತದಾನ ಮುಗಿದ ಬಳಿಕ ಹೊರಬೀಳಲಿರುವ ಎಕ್ಸಿಟ್ ಪೋಲ್ ಬಗ್ಗೆ ತೀವ್ರ ಕುತೂಹಲ ಮೂಡಿದೆ. ಶನಿವಾರ ಸಂಜೆ ಎಕ್ಸಿಟ್ ಪೋಲ್ ಪ್ರಕಟವಾಗಲಿದ್ದು, ಯಾರಿಗೆ ವಿಜಯಮಾಲೆ ಸಿಗಲಿದೆ ಅನ್ನೋದರ ಬಗ್ಗೆ ವಿವಿಧ ಸಮೀಕ್ಷೆಗಳು ಭವಿಷ್ಯ ನುಡಿಯಲಿವೆ. ಸಂಜೆ 6.30ರ ನಂತರವೇ ಎಕ್ಸಿಟ್ ಪೋಲ್ ಪ್ರಕಟಿಸಬೇಕು. ಇದಕ್ಕೂ ಮೊದಲು ಪ್ರಕಟಿಸುವಂತಿಲ್ಲವೆಂದು ಚುನಾವಣಾ ಆಯೋಗ ಖಡಕ್ ಸೂಚನೆ ನೀಡಿದೆ.
ಇದನ್ನೂ ಓದಿ: ಪ್ರಧಾನಿ ಮೋದಿ ಧ್ಯಾನ ಮಾಡಲು ಕನ್ಯಾಕುಮಾರಿಯ ವಿವೇಕಾನಂದ ಶಿಲಾ ಸ್ಮಾರಕವನ್ನು ಆರಿಸಿಕೊಂಡಿದ್ದೇಕೆ?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ