ಮಹಾರಾಷ್ಟ್ರ ಚುನಾವಣೆ: ಬಿಜೆಪಿಯಿಂದ 125 ಅಭ್ಯರ್ಥಿಗಳ ಪಟ್ಟಿ ರಿಲೀಸ್; ನಾಗ್ಪುರ ನೈಋತ್ಯದಿಂದ ಫಡ್ನವೀಸ್ ಕಣಕ್ಕೆ

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನಾಗಪುರ ನೈಋತ್ಯ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯುವುದಾಗಿ ಬಿಜೆಪಿ ಘೋಷಿಸಿದೆ.   

Last Updated : Oct 1, 2019, 03:36 PM IST
ಮಹಾರಾಷ್ಟ್ರ ಚುನಾವಣೆ: ಬಿಜೆಪಿಯಿಂದ 125 ಅಭ್ಯರ್ಥಿಗಳ ಪಟ್ಟಿ ರಿಲೀಸ್; ನಾಗ್ಪುರ ನೈಋತ್ಯದಿಂದ ಫಡ್ನವೀಸ್ ಕಣಕ್ಕೆ title=

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ  ಮಂಗಳವಾರ 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಜೆಪಿ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನಾಗಪುರ ನೈಋತ್ಯ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯುವುದಾಗಿ ಘೋಷಿಸಿದೆ. 

ಮೊದಲ ಹಂತದಲ್ಲಿ 52 ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡಿದ್ದು, 12 ಶಾಸಕರ ಟಿಕೆಟ್ ಕಡಿತಗೊಳಿಸಿದೆ. ಅಲ್ಲದೆ, ಈ ಬಾರಿ 12 ಮಹಿಳೆಯರಿಗೆ ಬಿಜೆಪಿ ಟಿಕೆಟ್ ನೀಡಿದೆ. ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಕೋತ್ರೂಡ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಪಂಕಜಾ ಮುಂಡೆ ಪಾರ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ.

ವಿಶೇಷವೆಂದರೆ, ಈ ಬಾರಿ ಬಿಜೆಪಿ ಲೋಕಮಾನ್ಯ ತಿಲಕ್ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಅವರ ಕುಟುಂಬದ ಸದಸ್ಯರನ್ನು ಚುನಾವಣಾ ಕಣಕ್ಕಿಳಿಸಿದೆ. ಲೋಕಮಾನ್ಯ ತಿಲಕ್ ಅವರ ಅಳಿಯನಾಗಿರುವ ಪುಣೆ ಮೇಯರ್ ಮುಕ್ತಾ ತಿಲಕ್ ಅವರನ್ನು ಕಸ್ಬಾ ಪೆತ್ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಇತ್ತೀಚೆಗೆ, ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಿದ ರಾಧಾಕೃಷ್ಣ ವಿಖ್ ಪಾಟೀಲ್ ಅವರನ್ನು ಶಿರಡಿ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದ್ದು, ಸಚಿವ ಗಿರೀಶ್ ಮಹಾಜನ್ ಅವರನ್ನು ಜಮ್ನರ್ ನಿಂದ ಸ್ಪರ್ಧೆಗೆ ಬಿಜೆಪಿ ಟಿಕೆಟ್ ನೀಡಿದೆ. ಬೇರೆ ಪಕ್ಷಗಳಿಂದ ವಲಸೆ ಬಂದಿರುವ ಅಭ್ಯರ್ಥಿಗಳಿಗೆ ಮೊದಲ ಪಟ್ಟಿಯಲ್ಲಿ ಸ್ಥಾನ ದೊರೆತಿದೆ.

Trending News