ಸಿಎಂ ಪದವಿಗೆ ರಾಜೀನಾಮೆ ನೀಡಿದ ದೇವೇಂದ್ರ ಫಡ್ನವೀಸ್

ಮುಖ್ಯಮಂತ್ರಿಯಾಗಿ ಅವರ ಅವಧಿ ಶನಿವಾರ ಅಂದರೆ ನವೆಂಬರ್ 9 ಕ್ಕೆ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಿದ್ದಾರೆ. 

Last Updated : Nov 8, 2019, 05:29 PM IST
ಸಿಎಂ ಪದವಿಗೆ ರಾಜೀನಾಮೆ ನೀಡಿದ ದೇವೇಂದ್ರ ಫಡ್ನವೀಸ್ title=
Photo Courtesy: ANI

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಇಂದು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.

ಶುಕ್ರವಾರ ಮಧ್ಯಾಹ್ನ ರಾಜ್ ಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿ ಮಾಡಿದ ಸಿಎಂ ದೇವೇಂದ್ರ ಫಡ್ನವೀಸ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು. 

ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾಧ್ಯಮದೊಂದಿಗೆ ಮಾತನಾಡಿದ ದೇವೇಂದ್ರ ಫಡ್ನವೀಸ್, 5 ವರ್ಷಗಳ ತಮ್ಮ ಸರ್ಕಾರದ ಸಾಧನೆಗಳನ್ನು ತಿಳಿಸಿದರು. ನಾವು ಮಹಾರಾಷ್ಟ್ರದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ. ಹಾಗಾಗಿಯೇ ಈ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷವು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಹೇಳಿದರು.

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಫೋನ್ ಕರೆಗಳು ಬಂದಿಲ್ಲ ಎಂದು ಸ್ಪಷ್ಟಪಡಿಸಿದ ಫಡ್ನವೀಸ್, 'ಶಿವಸೇನೆನಿಂದ 50 -50 ಸೂತ್ರದ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ' ಎಂದರು. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಬಿಜೆಪಿಯ ಹಿರಿಯ ಮುಖಂಡ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಬಗ್ಗೆ ಯಾವುದೇ ಹೇಳಿಕೆ ನೀಡಲು ನಿರಾಕರಿಸಿದರು.
 

Trending News