ಪರೀಕ್ಷೆಗಳನ್ನು ರದ್ದುಪಡಿಸಿದ ಮಹಾರಾಷ್ಟ್ರ,1-8 ನೇ ತರಗತಿ ವಿದ್ಯಾರ್ಥಿಗಳಿಗೆ ಬಡ್ತಿ

ಒಂದರಿಂದ ಎಂಟನೇ ತರಗತಿ ವರೆಗಿನ ಎಲ್ಲ ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆಯಿಲ್ಲದೆ ಮುಂದಿನ ಹಂತಕ್ಕೆ ಬಡ್ತಿ ಮಾಡುವುದಾಗಿ ಮಹಾರಾಷ್ಟ್ರ ಸರ್ಕಾರ ಶನಿವಾರ ಪ್ರಕಟಿಸಿದೆ.

Last Updated : Apr 3, 2021, 08:21 PM IST
 ಪರೀಕ್ಷೆಗಳನ್ನು ರದ್ದುಪಡಿಸಿದ ಮಹಾರಾಷ್ಟ್ರ,1-8 ನೇ ತರಗತಿ ವಿದ್ಯಾರ್ಥಿಗಳಿಗೆ ಬಡ್ತಿ  title=
file photo

ನವದೆಹಲಿ: ಒಂದರಿಂದ ಎಂಟನೇ ತರಗತಿ ವರೆಗಿನ ಎಲ್ಲ ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆಯಿಲ್ಲದೆ ಮುಂದಿನ ಹಂತಕ್ಕೆ ಬಡ್ತಿ ಮಾಡುವುದಾಗಿ ಮಹಾರಾಷ್ಟ್ರ ಸರ್ಕಾರ ಶನಿವಾರ ಪ್ರಕಟಿಸಿದೆ.

ಇದನ್ನೂ ಓದಿ: Night Party Prohibition: ರಾಜ್ಯದಲ್ಲಿ ಮತ್ತೆ ಕೊರೊನಾ ಉಲ್ಬಣ: ನೈಟ್ ಪಾರ್ಟಿ ನಿಷೇಧ!

ಶಾಲಾ ಶಿಕ್ಷಣ ಸಚಿವೆ ವರ್ಷಾ ಗಾಯಕವಾಡ್ ಟ್ವಿಟ್ಟರ್ ನಲ್ಲಿ ಈ ಘೋಷಣೆ ಮಾಡಿದ್ದಾರೆ.ಕೊರೊನಾ ಕಾರಣದಿಂದಾಗಿ ನಡೆಯುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಮಹಾರಾಷ್ಟ್ರ ರಾಜ್ಯದಾದ್ಯಂತ 1 ನೇ ತರಗತಿಯಿಂದ 8 ನೇ ತರಗತಿಯವರೆಗಿನ ಎಲ್ಲಾ ರಾಜ್ಯ ಮಂಡಳಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆಗಳಿಲ್ಲದೆ ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.ಆದರೆ, ಒಂಬತ್ತನೇ ತರಗತಿ ಮತ್ತು ಹನ್ನೆರಡನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ಬಾಕಿ ಇದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ: Dr K Sudhakar: 'ಸಭೆ, ಸಮಾರಂಭಗಳಲ್ಲಿ ಹೆಚ್ಚು ಜನರು ಸೇರಿದಂತೆ ಕ್ರಮ'

ಏತನ್ಮಧ್ಯೆ,10 ಮತ್ತು 12 ನೇ ತರಗತಿಗಳ ಪರೀಕ್ಷೆಗಳು ವೇಳಾಪಟ್ಟಿಯಂತೆ ನಡೆಯಲಿದೆ, COVID-19 ನಿಂದ ಬಳಲುತ್ತಿರುವ ವಿದ್ಯಾರ್ಥಿಗಳು ಜೂನ್‌ನಲ್ಲಿ ನಡೆಯಲಿರುವ ವಿಶೇಷ ಪರೀಕ್ಷೆಗಳಿಗೆ ಹಾಜರಾಗಬಹುದು ಎಂದು ಮಂಡಳಿ ಪ್ರಕಟಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
   

 

Trending News