Big News: ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ್ ಖರ್ಗೆ ಆಯ್ಕೆ

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಆಯ್ಕೆಯಾಗಿದ್ದಾರೆ.

Written by - Puttaraj K Alur | Last Updated : Oct 19, 2022, 02:39 PM IST
  • ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಆಯ್ಕೆ
  • ಬರೋಬ್ಬರಿ 2 ದಶಕಗಳ ಬಳಿಕ ಗಾಂಧಿಯೇತರ ನಾಯಕನಿಗೆ ಕಾಂಗ್ರೆಸ್‍ನ ಅಧ್ಯಕ್ಷ ಸ್ಥಾನ ಒಲಿದಿದೆ
  • ಮಲ್ಲಿಕಾರ್ಜುನ್ ಖರ್ಗೆ 7,897 ಮತ ಪಡೆದರೆ, ಪ್ರತಿಸ್ಪರ್ಧಿ ಶಶಿ ತರೂರ್ 1,072 ಮತ ಗಳಿಸಿದ್ದಾರೆ
Big News: ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ್ ಖರ್ಗೆ ಆಯ್ಕೆ title=
ಕಾಂಗ್ರೆಸ್'​ಗೆ ಕನ್ನಡಿಗ ಖರ್ಗೆ ಕಿಂಗ್!

ನವದೆಹಲಿ: ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಆಯ್ಕೆಯಾಗಿದ್ದಾರೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.

ಬರೋಬ್ಬರಿ 2 ದಶಕಗಳ ಬಳಿಕ ಗಾಂಧಿಯೇತರ ನಾಯಕನಿಗೆ ಕಾಂಗ್ರೆಸ್‍ನ ಅಧ್ಯಕ್ಷ ಸ್ಥಾನ ಒಲಿದಿದೆ. ಅ.17ರಂದು ನಡೆದಿರುವ ಎಐಸಿಸಿಯ ಅಧ್ಯಕ್ಷೀಯ ಚುನಾವಣೆಯ ಮತ ಏಣಿಕೆ ಬುಧವಾರ(ಅ.19) ನಡೆದಿದೆ.

ಇದನ್ನೂ ಓದಿ: ನ.11ಕ್ಕೆ ಪ್ರಧಾನಿ ಮೋದಿಯಿಂದ ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಲೋಕಾರ್ಪಣೆ

ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಒಟ್ಟು 7,897 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಶಶಿ ತರೂರ್ 1,072 ಮತಗಳನ್ನು ಪಡೆದಿದ್ದಾರೆ. 416 ಮತಗಳು ಅಸಿಂಧುವಾಗಿವೆ.

ನೂತನ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರಿಗೆ ಶಶಿ ತರೂರ್ ಸೇರಿದಂತೆ ಕಾಂಗ್ರೆಸ್‍ನ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಮುರುಘಾಮಠದಲ್ಲಿ ಬಿಎಸ್​ವೈ, ಶಾಮನೂರು ದುಡ್ಡಿದೆಯಾ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News