ಎಸ್ಪಿ-ಬಿಎಸ್ಪಿ ಮೈತ್ರಿಯನ್ನು ಸ್ವಾಗತಿಸಿದ ಮಮತಾ ಬ್ಯಾನರ್ಜೀ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪ್ರಬಲ ಸ್ಪರ್ಧೆಯನ್ನು ನೀಡುವ ನಿಟ್ಟಿನಲ್ಲಿ ಮೈತ್ರಿ ಮಾಡಿಕೊಂಡಿರುವ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳ ನಿರ್ಧಾರವನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಸ್ವಾಗತಿಸಿದ್ದಾರೆ.

Last Updated : Jan 12, 2019, 03:46 PM IST
ಎಸ್ಪಿ-ಬಿಎಸ್ಪಿ ಮೈತ್ರಿಯನ್ನು ಸ್ವಾಗತಿಸಿದ ಮಮತಾ ಬ್ಯಾನರ್ಜೀ title=

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪ್ರಬಲ ಸ್ಪರ್ಧೆಯನ್ನು ನೀಡುವ ನಿಟ್ಟಿನಲ್ಲಿ ಮೈತ್ರಿ ಮಾಡಿಕೊಂಡಿರುವ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳ ನಿರ್ಧಾರವನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಸ್ವಾಗತಿಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜೀ ಮುಂಬರುವ ಲೋಕಸಭೆ ಚುನಾವಣೆಗಾಗಿ ಎಸ್ಪಿ ಮತ್ತು ಬಿಎಸ್ಪಿ ಮೈತ್ರಿಕೂಟವನ್ನು ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ.ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸುವುದನ್ನು ಮಮತಾ ತೀವ್ರಗೊಳಿಸಿದ್ದಾರೆ.

ಕಳೆದ 2014 ರ ಚುನಾವಣೆಯಲ್ಲಿ ಬಿಜೆಪಿ ಪಕ್ಷವು 73 ಕ್ಷೇತ್ರಗಳಲ್ಲಿ ಭರ್ಜರಿ ಗೆಲವು ಸಾಧಿಸಿತ್ತು. ಈ ಹಿನ್ನಲೆಯಲ್ಲಿ ಈಗ ಉಭಯ ಪಕ್ಷಗಳು ಬಿಜೆಪಿ ಪ್ರತಿರೋಧ ನೀಡುವ ನಿಟ್ಟಿನಲ್ಲಿ ಒಗ್ಗಟ್ಟನ್ನು ಪ್ರದರ್ಶಿಸಲು ಮುಂದಾಗಿವೆ.ಉಪಚುನಾವಣೆಯಲ್ಲಿ ಮಾಯಾವತಿಯ ಬಿಎಸ್ಪಿ ಹಾಗೂ ಅಖಿಲೇಶ್ ಯಾದವ್ ಅವರ ಎಸ್ಪಿ ಪಕ್ಷವು  ಮೈತ್ರಿ ಮಾಡಿಕೊಳ್ಳುವುದರ ಮೂಲಕ  ಗೊರಖ್ಪುರ್,ಫುಲ್ಪುರ್,ಹಾಗೂ ಖೈರಾನಾ ಕ್ಷೇತ್ರಗಲ್ಲಿ ಗೆಲುವು ಸಾಧಿಸಿದ್ದವು.

ಈ ಹಿನ್ನಲೆಯಲ್ಲಿ ಈಗಲೂ ಕೂಡ ಇದೆ ಮಾದರಿಯ ಸೂತ್ರವನ್ನು ಅನುಸರಿಸಲು ಮುಂದಾಗಿವೆ. ಅಚ್ಚರಿಯಂದರೆ ಎರಡು ಪಕ್ಷಗಳು ಕಾಂಗ್ರೆಸ್ ಗೆ ಯಾವುದೇ ಆದ್ಯತೆ ನೀಡಿಲ್ಲ.ರಾಯಬರೇಲಿ ಮತ್ತು ಅಮೇಥಿ ಕ್ಷೇತ್ರಗಳನ್ನು ಮಾತ್ರ ಉಭಯ ಪಕ್ಷಗಳು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಟ್ಟಿವೆ.

Trending News