ದೆಹಲಿ: ಮೆಟ್ರೋ ಹಳಿಗೆ ಹಾರಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಆದರ್ಶನಗರ ಮೆಟ್ರೋ ನಿಲ್ದಾಣದಲ್ಲಿ ಚಲಿಸುತ್ತಿದ್ದ ಮೆಟ್ರೋ ರೈಲಿನ ಮುಂದೆ ಹಳಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.   

Last Updated : Sep 11, 2019, 10:00 PM IST
ದೆಹಲಿ: ಮೆಟ್ರೋ ಹಳಿಗೆ ಹಾರಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ title=

ದೆಹಲಿ: ಇಲ್ಲಿನ ಆದರ್ಶನಗರ ಮೆಟ್ರೋ ನಿಲ್ದಾಣದಲ್ಲಿ ಚಲಿಸುತ್ತಿದ್ದ ಮೆಟ್ರೋ ರೈಲಿನ ಮುಂದೆ ಹಳಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. 

ಆಜಾದ್ಪುರ ಮೆಟ್ರೋ ಪೊಲೀಸ್ ಠಾಣೆ ಪೊಲೀಸರು ಮಾಹಿತಿ ನೀಡಿದ್ದು, ಬುಧವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಆದರ್ಶ್ ನಗರ ಮೆಟ್ರೋ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೆಟ್ರೋ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.

ಆದರ್ಶ್ ನಗರ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ ನಂ 1 ರಲ್ಲಿ ಈ ಘಟನೆ ನಡೆದಿದ್ದು, 40 ವರ್ಷದ ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಆತನ ಬಳಿ ಯಾವುದೇ ಗುರುತಿನ ದಾಖಲೆಗಳಾಗಲೀ, ಡೆತ್ ನೋಟ್ ಆಗಲೀ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಮೃತನ ಗುರುತು ಪತ್ತೆಗೆ ವಿಚಾರಣೆ ಆರಂಭಿಸಿದ್ದಾರೆ. 

Trending News