ನವದೆಹಲಿ: ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದ ಕೆಳಗೆ ರಸ್ತೆಗೆ ಹಾರಿ 40 ವರ್ಷದ ವ್ಯಕ್ತಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಿಗ್ಗೆ 9.38 ರ ಸುಮಾರಿಗೆ ಪಿಸಿಆರ್ ಕರೆ ಬಂದಿದ್ದು, ಕೂಡಲೇ ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸ್ ಒಬ್ಬರು ಘಟನಾ ಸ್ಥಳಕ್ಕೆ ಧಾವಿಸಿ, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ ಅವರು ಬದುಕುಳಿಯಲಿಲ್ಲ ಎನ್ನಲಾಗಿದೆ.
ಜೆಜೆ ಕಾಲೋನಿ ಹಸ್ತಾಲ್ ರಸ್ತೆಯ ನಿವಾಸಿ ರಾಜೀವ್ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದ ಕೆಳಗೆ ರಸ್ತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ಬಿಕ್ಕಟ್ಟಿನಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿರುವ ಆತ್ಮಹತ್ಯಾ ಪತ್ರವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜೀವ್ ಅವರು ಮೆಟ್ರೋ ನಿಲ್ದಾಣದ ಹಳಿಗಳಿಂದ ಕೆಳಗಿಳಿದು ವಾಹನ ನಿಲುಗಡೆಗೆ ಪ್ರದೇಶಕ್ಕೆ ಹಾರಿದ್ದಾರೆ. ತಕ್ಷಣವೇ ಅವರನ್ನು ಮಾತಾ ಚಾನನ್ ದೇವಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಬದುಕಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ರಾಜೀವ ಅವರ ಬಳಿ ಇದ್ದ ಆಧಾರ್ ಕಾರ್ದಿನಿಂದಾಗಿ ಅವರ ಗುರುತನ್ನು ಪತ್ತೆ ಹಚ್ಚಲಾಗಿದೆ. ಘಟನೆ ಬಗ್ಗೆ ರಾಜೀವ ಅವರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ ಎಂದವರು ತಿಳಿಸಿದರು.