ಹಳೆಯ ದ್ವೇಷ ಹಿನ್ನೆಲೆ: ದೆಹಲಿಯ ಉಸ್ಮಾನ್‌ಪುರದಲ್ಲಿ ವ್ಯಕ್ತಿಗೆ ಶೂಟ್, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಪ್ರಯತ್ನ ನಡೆದಿದೆ ಎನ್ನಲಾಗಿದ್ದು, ಸಂತ್ರಸ್ತ ವ್ಯಕ್ತಿಯನ್ನು ಉತ್ತರ ಪ್ರದೇಶದ ಬುಲಂದ್‌ಶಹರ್ ಗ್ರಾಮದ ನಿವಾಸಿ ಮೊಹಮ್ಮದ್ ಹಸನ್ ಎಂದು ಗುರುತಿಸಲಾಗಿದೆ.   

Last Updated : Sep 27, 2019, 02:04 PM IST
ಹಳೆಯ ದ್ವೇಷ ಹಿನ್ನೆಲೆ: ದೆಹಲಿಯ ಉಸ್ಮಾನ್‌ಪುರದಲ್ಲಿ ವ್ಯಕ್ತಿಗೆ ಶೂಟ್, ಸಿಸಿಟಿವಿಯಲ್ಲಿ ದೃಶ್ಯ ಸೆರೆ title=
Pic Courtesy: ANI

ನವದೆಹಲಿ: ಈಶಾನ್ಯ ದೆಹಲಿಯ ಉಸ್ಮಾನ್‌ಪುರ ಪ್ರದೇಶದಲ್ಲಿ 56 ವರ್ಷದ ವ್ಯಕ್ತಿಯನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೆ ಪ್ರಯತ್ನಿಸಿರುವ ಘಟನೆ ಗುರುವಾರ ಸಂಜೆ ನಡೆದಿದೆ. 

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಪ್ರಯತ್ನ ನಡೆದಿದೆ ಎನ್ನಲಾಗಿದ್ದು, ಸಂತ್ರಸ್ತ ವ್ಯಕ್ತಿಯನ್ನು ಉತ್ತರ ಪ್ರದೇಶದ ಬುಲಂದ್‌ಶಹರ್ ಗ್ರಾಮದ ನಿವಾಸಿ ಮೊಹಮ್ಮದ್ ಹಸನ್ ಎಂದು ಗುರುತಿಸಲಾಗಿದೆ. 

ದಾಳಿಯ ಸಂದರ್ಭದಲ್ಲಿ ಹಸನ್ ಅವರ ಬೆನ್ನಿಗೆ ಗುಂಡೇಟು ತಗುಲಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಪಟ್ಪರ್ ಗಂಜ್ ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸಂಪೂರ್ಣ ದಾಳಿಯ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದೆ. ಇದರಲ್ಲಿ ಆರೋಪಿಯು ಹಸನ್ ಮತ್ತು ಆತನ ಸ್ನೇಹಿತನನ್ನು ಬೈಕ್‌ನಲ್ಲಿ ಬೆನ್ನಟ್ಟಿಹೋಗಿರುವುದು ಸ್ಪಷ್ಟವಾಗಿದೆ. ಬಳಿಕ ಬೈಕಿನಿಂದ ಇಳಿದ ಓರ್ವ ವ್ಯಕ್ತಿ ಹಸನ್‌ಗೆ ಗುಂಡು ಹಾರಿಸಿ ಪರಾರಿಯಾಗುವ ಮುನ್ನ ಬಂದೂಕಿನಿಂದ ಹೊಡೆದಿದ್ದಾನೆ.

ಹಸನ್ ಮತ್ತು ಆರೋಪಿಗಳು ಇಬ್ಬರೂ ಬುಲಂದ್‌ಶಹರ್‌ನ ಒಂದೇ ಗ್ರಾಮದ ನಿವಾಸಿಗಳು ಎಂಬುದು ತನಿಖೆ ವೇಳೆ ತಿಳಿದುಬಂದಿದೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. 

Trending News