ನವದೆಹಲಿ: ಶನಿವಾರದಂದು ರಾಜೀನಾಮೆ ನೀಡಿದ ಬಿಪ್ಲಬ್ ಕುಮಾರ್ ದೇಬ್ ನಂತರ ಮಾಣಿಕ್ ಸಹಾ ಅವರು ತ್ರಿಪುರಾ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.ಪಕ್ಷದ ಹಿರಿಯ ನಾಯಕ ಭೂಪೇಂದ್ರ ಯಾದವ್ ಅವರು ಸಹಾ ಅವರನ್ನು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನೇಮಕ ಮಾಡಿರುವ ಸುದ್ದಿಯನ್ನು ಟ್ವಿಟರ್ನಲ್ಲಿ ಪ್ರಕಟಿಸಿದ್ದಾರೆ.ತ್ರಿಪುರಾದಿಂದ ಪಕ್ಷದ ಶಾಸಕಾಂಗ ಗುಂಪಿನ ನಾಯಕರಾಗಿ ಆಯ್ಕೆಯಾಗಿರುವ ಮಾಣಿಕ್ ಸಹಾ ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇನ್ನೊಂದೆಡೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನೀವು ರಾಜ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತೀರಿ ಎಂದು ನನಗೆ ವಿಶ್ವಾಸವಿದೆ' ಎಂದು ನಿರ್ಗಮಿತ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿಯವರ ಅಧಿಕೃತ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷರಾದ ಸಹಾ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು, ದೇಬ್ ಅವರು ರಾಜ್ಯಪಾಲ ಎಸ್ಎನ್ ಆರ್ಯ ಅವರಿಗೆ ರಾಜೀನಾಮೆ ಸಲ್ಲಿಸಿದರು.ಸಭೆಯಲ್ಲಿ ದೇಬ್ 69 ವರ್ಷದ ಸಹಾ ಅವರ ಹೆಸರನ್ನು ಪ್ರಸ್ತಾಪಿಸುತ್ತಿದ್ದಂತೆ, ಸಚಿವ ರಾಮ್ ಪ್ರಸಾದ್ ಪೌಲ್ ಪ್ರತಿಭಟಿಸಿದರು, ಇದು ಶಾಸಕರ ನಡುವೆ ವಾಗ್ವಾದಕ್ಕೆ ಕಾರಣವಾಯಿತು ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಇದನ್ನೂ ಓದಿ: ವಿವಾಹ ದಿನ ವರ ಮಾಡಿದ ಈ ಒಂದು ತಪ್ಪಿನಿಂದ ಮುರಿದು ಬಿತ್ತು ಮದುವೆ ..!
ಹಿಂದಿನ ತ್ರಿಪುರ ರಾಜಮನೆತನದ ಸದಸ್ಯರಾದ ಉಪ ಮುಖ್ಯಮಂತ್ರಿ ಜಿಷ್ಣು ದೇವ್ ವರ್ಮಾ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಬೇಕೆಂದು ಪಾಲ್ ಬಯಸಿದ್ದರು ಎಂದು ಅವರು ಹೇಳಿದರು. ಬಿಜೆಪಿಯ ಹಿರಿಯ ನಾಯಕರಾದ ಭೂಪೇಂದರ್ ಯಾದವ್ ಮತ್ತು ವಿನೋದ್ ತಾವ್ಡೆ ಅವರು ಶಾಸಕಾಂಗ ಪಕ್ಷದ ನಾಯಕರ ಆಯ್ಕೆಗೆ ವೀಕ್ಷಕರಾಗಿದ್ದರು.
'ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿದ್ದೆ ಮತ್ತು ಹಾಗೆಯೇ ಮುಂದುವರಿಯುತ್ತೇನೆ" ಎಂದು ಸಹಾ ಮುಂದಿನ ಮುಖ್ಯಮಂತ್ರಿ ಎಂದು ಹೆಸರಿಸಿದ ನಂತರ ಸುದ್ದಿಗಾರರಿಗೆ ತಿಳಿಸಿದರು.ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾದ ಒಂದು ದಿನದ ನಂತರ 50 ವರ್ಷದ ದೇಬ್ ರಾಜೀನಾಮೆ ನೀಡಿದ್ದಾರೆ.ಪಕ್ಷ ಎಲ್ಲಕ್ಕಿಂತ ಮಿಗಿಲಾದುದು, ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ಬಿಜೆಪಿ ರಾಜ್ಯಾಧ್ಯಕ್ಷರಾಗಿರಲಿ ಅಥವಾ ತ್ರಿಪುರಾ ಮುಖ್ಯಮಂತ್ರಿಯಾಗಿರಲಿ, ನನಗೆ ನೀಡಿದ ಜವಾಬ್ದಾರಿಗಳಿಗೆ ನಾನು ನ್ಯಾಯ ಸಲ್ಲಿಸಿದ್ದೇನೆ ಎಂದು ನಾನು ಭಾವಿಸುತ್ತೇನೆ' ಎಂದು ರಾಜೀನಾಮೆ ನೀಡಿದ ನಂತರ ದೇಬ್ ಹೇಳಿದರು.
ಇದನ್ನೂ ಓದಿ: NEET-PG ಪರೀಕ್ಷೆ ಸ್ಥಗಿತಗೊಳ್ಳುವುದಿಲ್ಲ, ಅರ್ಜಿ ವಜಾಗೊಳಿಸಿದ ಸುಪ್ರೀಂ ಹೇಳಿದ್ದೇನು?
2023 ರ ಚುನಾವಣೆ ಬರಲಿದ್ದು, ಇಲ್ಲಿ ಜವಾಬ್ದಾರಿಯುತ ಸಂಘಟಕರು ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ಪಕ್ಷ ಬಯಸಿದೆ.ಏಕೆಂದರೆ, ಸಂಘಟನೆ ಗಟ್ಟಿಯಾಗಿದ್ದರೆ ಮಾತ್ರ ಸರಕಾರ ರಚನೆ ಸಾಧ್ಯ' ಎಂದು ಅವರು ಪಕ್ಷದ ಸಂಘಟನೆಯ ಹೊಣೆಗಾರಿಕೆಯನ್ನು ವಿವರಿಸಿದರು. 2018 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಬ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಲಾಯಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.