Manipur Sexual Violence : ಕಳೆದ 80 ದಿನಗಳಿಂದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದೆ. ಮೇ 4ರಂದು ವಿಕೃತ ಮನಸ್ಸಿನ ಪುರುಷರ ಗುಂಪೊಂದು ಮಹಿಳೆಯರನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ, ಸಾಮೂಹಿಕವಾಗಿ ಅತ್ಯಾಚಾರ ಎಸಗಿತ್ತು.
ಈ ಹೇಯ ಕೃತ್ಯದ ವಿಡಿಯೋವನ್ನು ದುಷ್ಕರ್ಮಿಗಳು ಸೋಷಿಯಲ್ ಮಿಡಿಯಾದಲ್ಲಿ ಹರಿಬಿಟ್ಟಿದ್ದರು. ಈ ಬಗ್ಗೆ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗುತ್ತಿವೆ. ಘಟನೆಯನ್ನು ಇಡೀ ದೇಶವೇ ಖಂಡಿಸಿದೆ.
ಇದನ್ನೂ ಒದಿ-ಉಗ್ರ ಕೃತ್ಯದ ಶಂಕೆ ಹಿನ್ನಲೆ: ದಾವಣಗೆರೆಯಲ್ಲಿ ವ್ಯಕ್ತಿಯ ಬಂಧನ..!
ದೇಶದ ಆಕ್ರೋಶಕ್ಕೆ ಮಣಿದ ಪ್ರಧಾನಿ ಮೋದಿ ಈ ಕೃತ್ಯದ ಬಗ್ಗೆ ಮಾತನಾಡಿ "ಘಟನೆಯ ವಿಡಿಯೋ ಕಂಡು ಆಘಾತಕ್ಕೊಳಗಾಗಿದ್ದೇನೆ. ಮಣಿಪುರದ ಹೆಣ್ಣುಮಕ್ಕಳ ಮೇಲಾದ ದೌರ್ಜನ್ಯವನ್ನು ಕ್ಷಮಿಸಲು ಸಾಧ್ಯವೇ ಇಲ್ಲ...ಆರೋಪಿಗಳನ್ನು ಸುಮ್ಮನೇ ಬಿಡುವುದಿಲ್ಲ" ಎಂದಿದ್ದರು.
ಜಗತ್ತಿನೆದುರು ಭಾರತ ತಲೆ ತಗ್ಗಿಸುವಂತಹ ಘಟನೆಗಳು ಬಿಜೆಪಿ ಆಡಳಿತದ ಮಣಿಪುರದಲ್ಲಿ ಜರುಗುತ್ತಿದ್ದರೂ ಪ್ರಧಾನಿ @narendramodi ಅವರಿಗೆ ಇದುವರೆಗೂ ಅಲ್ಲಿಗೆ ಭೇಟಿ ನೀಡಬೇಕೆಂದು ಮನಸಾಗಲಿಲ್ಲ.
ಮಣಿಪುರದ ಬಗ್ಗೆ ತುಟಿ ಬಿಚ್ಚುಲು ಅತ್ಯಂತ ಹೇಯ ಕೃತ್ಯ ನಡೆಯಬೇಕಾಯ್ತು.
ಗಲಭೆಗಳಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಂಡ ಮೋದಿಯವರಿಗೆ ಇದೆಲ್ಲಾ ಸಹಜ…
— Karnataka Congress (@INCKarnataka) July 20, 2023
ಇನ್ನು ಮೋದಿಯವರ ಹೇಳಿಕೆಯ ಕುರಿತು ಅಸಮಾಧಾನ ವ್ಯಕ್ತ ಪಡಿಸಿದ ಕಾಂಗ್ರೇಸ್ "ಜಗತ್ತಿನೆದುರು ಭಾರತ ತಲೆ ತಗ್ಗಿಸುವಂತಹ ಘಟನೆಗಳು ಬಿಜೆಪಿ ಆಡಳಿತದ ಮಣಿಪುರದಲ್ಲಿ ಜರುಗುತ್ತಿದ್ದರೂ ಪ್ರಧಾನಿ ಅವರಿಗೆ ಇದುವರೆಗೂ ಅಲ್ಲಿಗೆ ಭೇಟಿ ನೀಡಬೇಕೆಂದು ಮನಸಾಗಲಿಲ್ಲ. ಮಣಿಪುರದ ಬಗ್ಗೆ ತುಟಿ ಬಿಚ್ಚುಲು ಅತ್ಯಂತ ಹೇಯ ಕೃತ್ಯ ನಡೆಯಬೇಕಾಯಿತು" ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ. ಗಲಭೆಗಳಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಂಡ ಮೋದಿಯವರಿಗೆ ಇದೆಲ್ಲಾ ಸಹಜ ಎನ್ನಿಸುತ್ತಿರಬಹುದೇ? ಎಂದು ಸಹ ಪ್ರಶ್ನಿಸಿದೆ.
ಇದನ್ನೂ ಒದಿ-ರೈತರಿಗೆ 'ಕನ್ಯಾಭಾಗ್ಯ' ನೀಡುವಂತೆ ಸಿಎಂಗೆ ಪತ್ರ...!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.