ನನ್ನ ರಾಜೀನಾಮೆ ಕೇಳಲು ಅವರ್ಯಾರು?-ಸಿಎಂ ಮನೋಹರ್ ಲಾಲ್ ಕಟ್ಟರ್ ತಿರುಗೇಟು

ಕರ್ನಾಲ್‌ನಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಹರಿಯಾಣ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಘಟನೆಯ ವಿವಾದದ ನಡುವೆ, ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸೋಮವಾರದಂದು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Written by - Zee Kannada News Desk | Last Updated : Aug 30, 2021, 08:04 PM IST
  • "ನನ್ನ ರಾಜೀನಾಮೆಗೆ ಒತ್ತಾಯಿಸಲು ಕ್ಯಾಪ್ಟನ್ ಅಮರೀಂದರ್ ಸಿಂಗ್ ಯಾರು, ಬದಲಾಗಿ ಅವರು ರಾಜೀನಾಮೆ ನೀಡಬೇಕು ಏಕೆಂದರೆ ಅವರು ರೈತರ ಆಂದೋಲನದ ಹಿಂದೆ ಇದ್ದಾರೆ.
  • ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಪಂಜಾಬಿನವರು.ಹರಿಯಾಣದ ರೈತರು ಸಿಂಗು ಅಥವಾ ಟಿಕ್ರಿಯಲ್ಲಿ ಪ್ರತಿಭಟನೆ ನಡೆಸುತ್ತಿಲ್ಲ ಎಂದು ಖಟ್ಟರ್ ಹೇಳಿದರು.
ನನ್ನ ರಾಜೀನಾಮೆ ಕೇಳಲು ಅವರ್ಯಾರು?-ಸಿಎಂ ಮನೋಹರ್ ಲಾಲ್ ಕಟ್ಟರ್ ತಿರುಗೇಟು title=

ನವದೆಹಲಿ: ಕರ್ನಾಲ್‌ನಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಹರಿಯಾಣ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಘಟನೆಯ ವಿವಾದದ ನಡುವೆ, ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸೋಮವಾರದಂದು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Navjot Singh Sidhu : ಕಾಂಗ್ರೆಸ್ ಗೆದ್ದರೆ ಸಿಧು ಮುಂದಿನ ಪಂಜಾಬ್ ಸಿಎಂ!

"ನನ್ನ ರಾಜೀನಾಮೆಗೆ ಒತ್ತಾಯಿಸಲು ಕ್ಯಾಪ್ಟನ್ ಅಮರೀಂದರ್ ಸಿಂಗ್ ಯಾರು, ಬದಲಾಗಿ ಅವರು ರಾಜೀನಾಮೆ ನೀಡಬೇಕು ಏಕೆಂದರೆ ಅವರು ರೈತರ ಆಂದೋಲನದ ಹಿಂದೆ ಇದ್ದಾರೆ. ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಪಂಜಾಬಿನವರು.ಹರಿಯಾಣದ ರೈತರು ಸಿಂಗು ಅಥವಾ ಟಿಕ್ರಿಯಲ್ಲಿ ಪ್ರತಿಭಟನೆ ನಡೆಸುತ್ತಿಲ್ಲ ಎಂದು ಖಟ್ಟರ್ ಹೇಳಿದರು.

ಇದೆ ವೇಳೆ ಅವರು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ವಿರುದ್ಧ ವಾಗ್ದಾಳಿ ನಡೆಸಿದ ಕಟ್ಟರ್ ಅವರು ರೈತರನ್ನು ಪ್ರಚೋದಿಸುತ್ತಿದ್ದಾರೆ ಎಂದು ಹೇಳಿದರು.

"ಪಂಜಾಬ್‌ನಲ್ಲಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರೈತರನ್ನು ಪ್ರಚೋದಿಸುತ್ತಿದ್ದಾರೆ ಮತ್ತು ಹರಿಯಾಣದಲ್ಲಿ ಭೂಪಿಂದರ್ ಸಿಂಗ್ ಹೂಡಾ ಮತ್ತು ಇತರ ಕಾಂಗ್ರೆಸ್ ನಾಯಕರು ಅವರನ್ನು ಪ್ರಚೋದಿಸುತ್ತಿದ್ದಾರೆ...ಅನಿರ್ದಿಷ್ಟವಾಗಿ ರಸ್ತೆಗಳನ್ನು ನಿರ್ಬಂಧಿಸಲು ಯಾರಿಗೂ ಹಕ್ಕಿಲ್ಲ" ಎಂದು ಖಟ್ಟರ್ ಹೇಳಿದರು.

ಇದನ್ನೂ ಓದಿ: ಕ್ಯಾಪ್ಟನ್ ಅಮರೀಂದರ್ ಸಿಂಗ್ ನೇತೃತ್ವದಲ್ಲಿಯೇ ಕಾಂಗ್ರೆಸ್ ಚುನಾವಣೆ ಎದುರಿಸಲಿದೆ- ಹರೀಶ್ ರಾವತ್

ಇದಕ್ಕೆ ಪ್ರತಿಕ್ರಿಯೆಯಾಗಿ, ಪಂಜಾಬ್ ಸಿಎಂ ಅಮರೀಂದರ್ ಸಿಂಗ್ (Amarinder Singh) ಅವರು ಹರ್ಯಾಣದ ಸಿಎಂ ಮೇಲೆ ವಾಗ್ದಾಳಿ ನಡೆಸಿದ್ದು, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಕ್ರಿಮಿನಲ್ ದಾಳಿಯನ್ನು ಸಮರ್ಥಿಸಿಕೊಳ್ಳುವುದಕ್ಕೆ ಕಟ್ಟರ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

"ಎಂಎಲ್ ಖಟ್ಟರ್ ಅವರ ಟೀಕೆಗಳು ಅವರ ಸರ್ಕಾರದ ರೈತ ವಿರೋಧಿ ಕಾರ್ಯಸೂಚಿಯನ್ನು ಸಂಪೂರ್ಣವಾಗಿ ಬಹಿರಂಗಪಡಿಸಿವೆ" ಎಂದು ಪಂಜಾಬ್ ಮುಖ್ಯಮಂತ್ರಿ ಕಚೇರಿ ಉಲ್ಲೇಖಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News