ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಸಂಚು?

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಶ್ರೀಲಂಕಾದಲ್ಲಿ ಹತ್ಯೆ ಮಾಡಿದ ಮಾದರಿಯಲ್ಲಿಯೇ ಮಾವೋವಾದಿಗಳು ಸಂಚು ರೂಪಿಸಿದ್ದಾರೆ ಎಂಬ ಆತಂಕಕಾರಿ ಮಾಹಿತಿಯೊಂದು ಬಹಿರಂಗವಾಗಿದೆ. 

Last Updated : Jun 8, 2018, 02:39 PM IST
ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಸಂಚು? title=

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಶ್ರೀಲಂಕಾದಲ್ಲಿ ಹತ್ಯೆ ಮಾಡಿದ ಮಾದರಿಯಲ್ಲಿಯೇ ಮಾವೋವಾದಿಗಳು ಸಂಚು ರೂಪಿಸಿದ್ದಾರೆ ಎಂಬ ಆತಂಕಕಾರಿ ಮಾಹಿತಿಯೊಂದು ಬಹಿರಂಗವಾಗಿದೆ. 

ಈ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗಪಡಿಸಿರುವ ಪುಣೆ ಪೊಲೀಸರು ಪಶ್ಚಿಮ ಬಂಗಾಳ ಮೂಲದ ಮಾವೋವಾದಿ ಕಿಶನ್ ಎಂಬುವರು ರೋನಾ ಜೇಕಬ್ ಎಂಬುವರಿಗೆ ಪತ್ರ ಬರೆದಿದ್ದು ಅದರಲ್ಲಿ ಶ್ರೀಲಂಕಾದಲ್ಲಿ ರಾಜೀವ್ ಗಾಂಧಿ ಅವರಿಗೆ ಗೌರವಾರ್ಥ ಪರೇಡ್ ನಡೆಯುತ್ತಿದ್ದಾಗ ಓರ್ವ ತನ್ನ ಕೈಯಲ್ಲಿದ್ದ ಬಂದೂಕಿನಿಂದ ರಾಜೀವ್ ಗಾಂಧಿ ಅವರ ತಲೆಗೆ ಗಂಭೀರವಾಗಿ ಹೊಡೆದಿದ್ದರು. ಇದೇ ರೀತಿಯಲ್ಲಿ ಮೋದಿ ಅವರ ಹತ್ಯೆ ಮಾಡುವ ಕುರಿತಂತೆ ಬರೆಯಲಾಗಿದೆ ಎಂದು ಪುಣೆ ಪೊಲೀಸರು ತಿಳಿಸಿದ್ದಾರೆ.

ಸಾಮಾನ್ಯವಾಗಿ ಸಭೆ ಸಮಾರಂಭಗಳಲ್ಲಿ ಗಣ್ಯರು ಭಾಗವಹಿಸಿದ್ದ ಸಂದರ್ಭದಲ್ಲಿ ಹತ್ಯೆ ಮಾಡುವುದು ಸುಲಭವಾದ್ದರಿಂದ ಶ್ರೀಲಂಕಾದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಲಾಗಿತ್ತು. ಇದೀಗ ಅದೇ ಮಾದರಿಯಲ್ಲಿ ಪ್ರಧಾನಿ ಮೋದಿ ಅವರು ಸಾರ್ವಜನಿಕ ಸಮಾರಂಭದಲ್ಲಿ ಜನತೆಯ ಬಳಿ ತೆರಳಿದ ಸಂದರ್ಭದಲ್ಲಿ ಕಿಶನ್ ಎಂಬಾತ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 

ಇದೀಗ ಹತ್ಯೆಗೆ ಸಂಚು ರೂಪಿಸಿದ್ದ ಪತ್ರವನ್ನು ಹೈಕೋರ್ಟ್ಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಪಶ್ಚಿಮ ಬಂಗಾಳ ಮತ್ತು ಬಿಹಾರದ ಚುನಾವಣಾ ಪ್ರಚಾರದ ವೇಳೆ ಮಾನವ ಬಾಂಬ್ ದಾಳಿ ನಡೆಸಲು ಮಾವೋವಾದಿಗಳು ಸಂಚು ರೂಪಿಸಿದ್ದಾರೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ. 

Copy of letter

ಅಷ್ಟೇ ಅಲ್ಲದೆ, ಮುಂಬೈ ಸರಣಿ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಹಫೀಸ್ ಸಯೀದ್ ಆಪ್ತ ಮೌಲಾನ ಬಷೀರ್ ಅಹಮದ್ ರಾವಲ್ಕೊಟ್ ನಲ್ಲಿ ಶುಕ್ರವಾರ ರಂಜಾನ್ ಸಂಬಂಧ ನಡೆದ ಬಹಿರಂಗ ಸಭೆಯೊಂದರಲ್ಲಿ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡಿ, ಭಾರತವನ್ನು ವಿಭಾಜಿಸಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. " ಭಾರತ ಮತ್ತು ಅಮೇರಿಕಾದಲ್ಲಿ ಇಸ್ಲಾಂ ಬಾವುಟವನ್ನು ಹಾರಿಸಲಾಗುವುದು" ಎಂದು ಹೇಳಿರುವುದು ಮೋದಿ ಹತ್ಯೆ ಸಂಚು ವಿಚಾರಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ. 

Trending News