ಮುಂಬೈನ ಗೋರೆಗಾಂವ್ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ: 6 ಮೃತ, 40ಕ್ಕೂ ಹೆಚ್ಚು ಮಂದಿಗೆ ಗಾಯ

Fire Accident: ಮುಂಬೈನಲ್ಲಿ 7 ಅಂತಸ್ತಿನ ಕಟ್ಟಡವೊಂದರಲ್ಲಿ ಸಂಭವಿಸಿರುವ ಭಾರಿ ಅಗ್ನಿ ಅವಘಡದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರು ತೀವ್ರ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. 

Written by - Yashaswini V | Last Updated : Oct 6, 2023, 09:15 AM IST
  • ಗೋರೆಗಾಂವ್‌ನ ಜೈ ಭವಾನಿ ಎಂಬ ಹೆಸರಿನ ಏಳು ಅಂತಸ್ತಿನ ಕಟ್ಟಡದ ಪಾರ್ಕಿಂಗ್ ಪ್ರದೇಶದಲ್ಲಿ ಮೊದಲಿಗೆ ಕಾಣಿಸಿಕೊಂಡ ಬೆಂಕಿ
  • ಈ ಘಟನೆಯಲ್ಲಿ, ಹಲವಾರು ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಸುಟ್ಟು ಭಸ್ಮವಾಗಿವೆ
  • ಗಾಯಾಳುಗಳನ್ನು ಎಚ್‌ಬಿಟಿ ಆಸ್ಪತ್ರೆ ಮತ್ತು ಕೂಪರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈನ ಗೋರೆಗಾಂವ್ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ: 6 ಮೃತ, 40ಕ್ಕೂ ಹೆಚ್ಚು ಮಂದಿಗೆ ಗಾಯ  title=

Mumbai Fire Accident: ಮುಂಬೈನ ಗೋರೆಗಾಂವ್‌ನಲ್ಲಿರುವ ಏಳು ಅಂತಸ್ತಿನ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದ್ದು ಇದುವರೆಗೂ ಆರು ಮಂದಿ ಮೃತಪಟ್ಟಿದ್ದಾರೆ. ಮುಂಜಾನೆ 3 ಗಂಟೆಗೆ ಸಂಭವಿಸಿದ ಈ ಅಗ್ನಿ ಅವಘಡದಲ್ಲಿ 40ಕ್ಕೂ ಹೆಚ್ಚು ಜನರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. 

ಆರಂಭಿಕ ವರದಿಗಳ ಪ್ರಕಾರ, ಗೋರೆಗಾಂವ್‌ನ ಜೈ ಭವಾನಿ ಎಂಬ ಹೆಸರಿನ ಏಳು ಅಂತಸ್ತಿನ ಕಟ್ಟಡದ ಪಾರ್ಕಿಂಗ್ ಪ್ರದೇಶದಲ್ಲಿ ಮೊದಲಿಗೆ ಈ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಇಡೀ ಕಟ್ಟಡಕ್ಕೆ ಬೆಂಕಿ ಕೆನ್ನಾಲಿಗೆ ಹರಡಿದೆ. ಈ ಘಟನೆಯಲ್ಲಿ, ಹಲವಾರು ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಸುಟ್ಟು ಭಸ್ಮವಾಗಿವೆ ಎಂದು ವರದಿಯಾಗಿದೆ.  ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಅಗ್ನಿಶಾಮಕ ಕಾರ್ಯಾಚರಣೆ ಆರಂಭಿಸಿದ್ದು ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ.  

ಇದನ್ನೂ ಓದಿ- ಸ್ಲೀಪರ್‌ ರೈಲಿನ ವಿನ್ಯಾಸ ಹೇಗಿರಲಿದೆ ಗೊತ್ತಾ .?

ಗಾಯಾಳುಗಳನ್ನು ಎಚ್‌ಬಿಟಿ ಆಸ್ಪತ್ರೆ ಮತ್ತು ಕೂಪರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡಿರುವ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. 25 ಗಾಯಾಳುಗಳನ್ನು ಎಚ್‌ಬಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದರಲ್ಲಿ 12 ಪುರುಷರು ಮತ್ತು 13 ಮಹಿಳೆಯರು ಇದ್ದಾರೆ. ಇದಲ್ಲದೆ, ಅಪ್ರಾಪ್ತ ಬಾಲಕಿಗೂ ಇಲ್ಲಿಯೇ ಚಿಕಿತ್ಸೆ ಮುಂದುವರೆದಿದೆ. 

ಅದೇ ಸಮಯದಲ್ಲಿ, ಮುಂಬೈನ ಕೂಪರ್ ಆಸ್ಪತ್ರೆಗೆ 15 ಜನರನ್ನು ದಾಖಲಿಸಲಾಗಿದೆ. ಅಲ್ಲಿ 6 ಪುರುಷರು ಮತ್ತು 9 ಮಹಿಳೆಯರು ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇದನ್ನೂ ಓದಿ- 'ಸಪ್ತಪದಿ' ಮತ್ತಿತರ ವಿಧಿ ವಿಧಾನಗಳಿಲ್ಲದ ಹಿಂದೂ ವಿವಾಹಕ್ಕೆ ಮಾನ್ಯತೆ ಇಲ್ಲ: ಅಲಹಾಬಾದ್ ಹೈಕೋರ್ಟ್

ಸ್ಥಳೀಯರ ಪ್ರಕಾರ, ಪಾರ್ಕಿಂಗ್ ಪ್ರದೇಶದಲ್ಲಿ ಬಿದ್ದಿದ್ದ ಬಟ್ಟೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬಳಿಕ ಇದು ಇಡೀ ಕಟ್ಟಡಕ್ಕೆ ಪಸರಿಸಿದೆ ಎಂದು ತಿಳಿದುಬಂದಿದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News