ನವದೆಹಲಿ: ಮುಂಬರುವ ಚತ್ತೀಸ್ ಘಡ್ ರಾಜ್ಯ ಚುನಾವಣೆಯಲ್ಲಿ ಮಾಯಾವತಿ ನೇತೃತ್ವದ ಬಿಎಸ್ಪಿ ಪಕ್ಷವು ಅಜಿತ್ ಜೋಗಿಯವರ ಜನತಾ ಕಾಂಗ್ರೆಸ್ ಪಕ್ಷದ ಮೈತ್ರಿಕೂಟಕ್ಕೆ ಮುಂದಾಗಿದೆ.
ಆ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಹಾಮೈತ್ರಿಕೂಟದ ಕನಸು ಕಾಣುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. 2016 ರಲ್ಲಿ ಕಾಂಗ್ರೆಸ್ ನಿಂದ ಹೋರಹಾಕಲ್ಪಟ್ಟಿದ್ದ ಅಜಿತ್ ಜೋಗಿ ಅವರು ಹೊಸದಾಗಿ ಜನತಾ ಕಾಂಗ್ರೆಸ್ ಪಕ್ಷವನ್ನು ಹುಟ್ಟು ಹಾಕಿದ್ದರು. ಆ ಮೂಲಕ ಪರೋಕ್ಷವಾಗಿ ಬಿಜೆಪಿಗೆ ಅನುಕೂಲ ಮಾಡಿಕೊಟ್ಟಿದ್ದರು.
ಈಗ ಮಾಯಾವತಿಯವರು ಉತ್ತರದ ರಾಜ್ಯಗಳಲ್ಲಿ ಪ್ರಭಾವದ ಹೊಂದಿರುವ ಹಿನ್ನಲೆಯಲ್ಲಿ ಅಜಿತ್ ಜೋಗಿ ಅವರ ಜನತಾ ಕಾಂಗ್ರೆಸ್ ಜೊತೆ ಸೀಟ್ ಹಂಚಿಕೆ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಈಗ ಮಾಯಾವತಿ ಅವರನ್ನು ಬಿಎಸ್ಪಿ ಮತ್ತು ಜನತಾ ಕಾಂಗ್ರೆಸ್ ಪಕ್ಷದ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಜನತಾ ಕಾಂಗ್ರೆಸ್ ಪಕ್ಷವು ಮೈತ್ರಿ ಮಾಡಿಕೊಂಡಿರುವ ಈ ಹಿನ್ನಲೆಯಲ್ಲಿ ಬಿಎಸ್ಪಿ 35 ಸ್ಥಾನಗಳಲ್ಲಿ ಸ್ಪರ್ಧಿಸಿದರೆ ಜನತಾ ಕಾಂಗ್ರೆಸ್ 55 ಸ್ಥಾನಗಳಲ್ಲಿ ಸ್ಪರ್ಧಿಸುತ್ತದೆ ಎಂದು ತಿಳಿದು ಬಂದಿದೆ. ಒಂದು ವೇಳೆ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದರೆ ಅಜಿತ್ ಜೋಗಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಯಾವತಿ ತಿಳಿಸಿದ್ದಾರೆ.