ನವದೆಹಲಿ: ಬಿಎಸ್ಪಿ ತನ್ನ ಲೋಕಸಭಾ ಸಂಸದ ಡ್ಯಾನಿಶ್ ಅಲಿಯನ್ನು ಪಕ್ಷದಿಂದ ಅಮಾನತುಗೊಳಿಸಿದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ ಅವರ ಆದೇಶದ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಈ ಆದೇಶಕ್ಕೆ ಸಂಬಂಧಿಸಿದ ಪತ್ರವನ್ನು ಪಕ್ಷವು ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಎಕ್ಸ್ನಲ್ಲಿ ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಮನೆಯಲ್ಲಿ ವ್ಯಾಕ್ಸಿಂಗ್ ಮಾಡುವಾಗ ಈ 5 ತಪ್ಪುಗಳನ್ನು ಮಾಡಬೇಡಿ, ನಿಮ್ಮ ಚರ್ಮವು ಹಾನಿಗೊಳಗಾಗಬಹುದು
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ ಅವರು ಡ್ಯಾನಿಶ್ ಅಲಿ ಅವರನ್ನು ಉದ್ದೇಶಿಸಿ ಪತ್ರವನ್ನೂ ನೀಡಿದ್ದಾರೆ. ಈ ಪತ್ರದಲ್ಲಿ ಮಿಶ್ರಾ, 'ಪಕ್ಷದ ಸಿದ್ಧಾಂತ, ಶಿಸ್ತು ಮತ್ತು ನೀತಿಗಳಿಗೆ ವಿರುದ್ಧವಾದ ಏನನ್ನೂ ಮಾಡಕೂಡದು ಎಂದು ನಿಮಗೆ ಹಲವು ಬಾರಿ ಮೌಖಿಕವಾಗಿ ಹೇಳಲಾಗಿದೆ. ಹೀಗಿದ್ದರೂ ನಿರಂತರವಾಗಿ ಪಕ್ಷದ ವಿರುದ್ಧ ಕೆಲಸ ಮಾಡುತ್ತಿದ್ದೀರಿ.ನೀವು 2018 ರ ವರೆಗೆ ದೇವೇಗೌಡರ ಜನತಾ ಪಕ್ಷದ ಸದಸ್ಯರಾಗಿ ಕೆಲಸ ಮಾಡುತ್ತಿದ್ರಿ. ಆ ಸಮಯದಲ್ಲಿ ಕರ್ನಾಟಕದಲ್ಲಿ ಜನತಾ ಪಕ್ಷದೊಂದಿಗೆ ಬಿಎಸ್ಪಿ ಚುನಾವಣೆ ಎದುರಿಸಿತ್ತು. ಆ ಕಾಲದಲ್ಲಿ ದೇವೇಗೌಡರ ಪಕ್ಷದ ಪರವಾಗಿ ತುಂಬಾ ಕ್ರಿಯಾಶೀಲರಾಗಿದ್ರಿ. ಆ ಚುನಾವಣೆಯ ಫಲಿತಾಂಶ ಹೊರಬಿದ್ದ ನಂತರ ದೇವೇಗೌಡರ ಕೋರಿಕೆಯ ಮೇರೆಗೆ ನಿಮಗೆ ಅಮ್ರೋಹ ಲೋಕಸಭಾ ಕ್ಷೇತ್ರದಿಂದ ಬಿಎಸ್ಪಿ ಟಿಕೆಟ್ ನೀಡಲಾಗಿತ್ತು.'ಚುನಾವಣೆಗೆ ಟಿಕೆಟ್ ಪಡೆದ ಮೇಲೆ, ನೀವು ಯಾವಾಗಲೂ ಪಕ್ಷದ ನೀತಿಗಳು ಮತ್ತು ಆದೇಶಗಳನ್ನು ಅನುಸರಿಸುತ್ತೀರಿ ಮತ್ತು ಪಕ್ಷದ ಹಿತಾಸಕ್ತಿಗಳನ್ನು ಯಾವಾಗಲೂ ಮುಂದಿಡುತ್ತಾರೆ ಎಂದು ದೇವೇಗೌಡರು ಭರವಸೆ ನೀಡಿದ್ದರು. ಈ ಆಶ್ವಾಸನೆಯನ್ನು ನೀವೂ ಅವರಿಗೂ ಪುನರುಚ್ಚರಿಸಿದ್ದೀರಿ. ಈ ಆಶ್ವಾಸನೆಯನ್ನು ನಂಬಿ ಬಿಎಸ್ಪಿ ಸದಸ್ಯತ್ವ ನೀಡಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಮಾಡಿತ್ತು ಎಂದು ಸತೀಶ್ ಚಂದ್ರಾ ಹೇಳಿದ್ದಾರೆ.
Bahujan Samaj Party (BSP) suspends its MP Danish Ali for indulging in anti-party activities: BSP pic.twitter.com/BKHHuVbStw
— ANI (@ANI) December 9, 2023
ಇದನ್ನೂ ಓದಿ: ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದರಿಂದ ಎಷ್ಟೊಂದು ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?
ದೇವೇಗೌಡರ ಆಶ್ವಾಸನೆ ಮತ್ತು ನಿಮ್ಮ ಮನವಿಯನ್ನು ಪರಿಗಣಿಸಿ ಪಕ್ಷವು ನಿಮ್ಮನ್ನು ಅಮ್ರೋಹದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಮಾಡಿ ಲೋಕಸಭೆಗೆ ಕಳುಹಿಸಿದೆ ಎಂದು ಸತೀಶ್ ಚಂದ್ರ ಮಿಶ್ರಾ ಬರೆದಿದ್ದಾರೆ. ಆದರೆ ನೀವು ಕೊಟ್ಟ ಆಶ್ವಾಸನೆಗಳನ್ನು ಮರೆತು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದೀರಿ. ಇದನ್ನು ಗಮನದಲ್ಲಿಟ್ಟುಕೊಂಡು, ತಕ್ಷಣವೇ ಜಾರಿಗೆ ಬರುವಂತೆ ನಿಮ್ಮ ಬಿಎಸ್ಪಿ ಸದಸ್ಯತ್ವವನ್ನು ಅಮಾನತುಗೊಳಿಸಲಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ