Pulse Polio: ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿಸುವಂತೆ ನಾಗರಿಕರಲ್ಲಿ ಹೆಚ್ಚು ಅರಿವು ಮೂಡಿಸಬೇಕೆಂದು ಪೂರ್ವ ವಲಯ ಆಯುಕ್ತ ಸ್ನೇಹಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಒಂದೇ ಇನ್ನಿಂಗ್ಸ್’ನಲ್ಲಿ 159 ರನ್… 24ರ ಹರೆಯದ ಭಾರತದ ಕ್ರಿಕೆಟಿಗನಿಂದ ಅಮೋಘ ಶತಕದಾಟ!
ಪೂರ್ವ ವಲಯ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋಗೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾರ್ಚ್ 3 ರಿಂದ 6ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ಪೂರ್ವ ವಲಯ ವ್ಯಾಪ್ತಿಯಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಹಾಕಿಸಲು ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ ಕೊಳಗೇರಿ ಪ್ರದೇಶ, ವಲಸಿಗರು ಹೆಚ್ಚಿರುವ ಪ್ರದೇಶ, ಕಟ್ಟಡ ನಿರ್ಮಾಣ ಪ್ರದೇಶ, ಜನನಿಬಿಡ ಪ್ರದೇಶಗಳಾದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಶಾಲೆಗಳು, ಅಂಗವಾಡಿ, ಶಿಶು ವಿಹಾರಗಳಲ್ಲಿ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸಲು ಸೂಚಿಸಿದರು.
ಧ್ವನಿವರ್ಧಕಗಳ ಮೂಲಕ ಜಾಗೃತಿ:
ಪೋಲಿಯೊ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಸಲುವಾಗಿ ಪ್ರತಿನಿತ್ಯ ಮನೆಯಿಂದ ಮನೆಗೆ ತ್ಯಾಜ್ಯ ಸಂಗ್ರಹಿಸುವ ಆಟೋ ಟಿಪ್ಪರ್ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸಲು ಸೂಚನೆ ನೀಡಿದರು.
ಸಭೆಯಲ್ಲಿ ವಲಯ ಜಂಟಿ ಆಯುಕ್ತ ಪಲ್ಲವಿ, ವಲಯ ಆರೋಗ್ಯಾಧಿಕಾರಿ ಸವಿತಾ, ಆರೋಗ್ಯ ವೈದ್ಯಾಧಿಕಾರಿ ಫನಾ ಸೇರಿದಂತೆ ಇನ್ನಿತರರು ಹಾಜರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.