Rain Alert: ರಾಜ್ಯದಲ್ಲಿ ಮುಂದಿನ 3 ದಿನ ಕುಂಭದ್ರೋಣ ಮಳೆ! ಈ ಜಿಲ್ಲೆಗಳಲ್ಲಿ ಜಲಪ್ರವಾಹದ ಮುನ್ಸೂಚನೆ... ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!?

Karnataka Rain Update: ಸೆಪ್ಟೆಂಬರ್‌ ತಿಂಗಳ ಮೊದಲ ಮೂರು ಬಿಡುವು ನೀಡಿದ್ದ ವರುಣ ಮತ್ತೆ ಅಬ್ಬರ ಶುರು ಮಾಡಿದ್ದಾನೆ. ಕರಾವಳಿ ಹಾಗೂ ಉತ್ತರ ಕರ್ನಾಟಕದ ವಿಜಯಪುರ, ರಾಯಚೂರು, ಬಾಗಲಕೋಟೆ, ಕಲಬುರಗಿಯಲ್ಲಿ ಮುಂದಿನ 2-3 ದಿನಗಳ ಕಾಲ ಭಾರೀ ಮಳೆ ಸುರಿಯುವ ಭೀತಿ ಇದೆ. ಇನ್ನೊಂದೆಡೆ ವರುಣಾರ್ಭಟ ಮುಂದುವರಿದರೆ ಇಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಸಾಧ್ಯತೆ ಇದೆ.  

Written by - Bhavishya Shetty | Last Updated : Sep 26, 2024, 03:33 PM IST
    • ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ
    • ಮೂರು ಜಿಲ್ಲೆಗಳಿಗೆ ರೆಡ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ
    • ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಿದ್ದು ಇಂದೂ ಸಹ ವ್ಯಾಪಕ ಮಳೆಯಾಗಲಿದೆ
Rain Alert: ರಾಜ್ಯದಲ್ಲಿ ಮುಂದಿನ 3 ದಿನ ಕುಂಭದ್ರೋಣ ಮಳೆ! ಈ ಜಿಲ್ಲೆಗಳಲ್ಲಿ ಜಲಪ್ರವಾಹದ ಮುನ್ಸೂಚನೆ... ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!? title=
Rain Alert

Rain Update: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸೆಪ್ಟೆಂಬರ್‌ 25ರಂದು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಿದ್ದು ಇಂದೂ ಸಹ ವ್ಯಾಪಕ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೆ ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ಕೊನೆಗೂ ಸ್ಪಷ್ಟನೆ ಕೊಟ್ಟ ಡಿಕೆ ಶಿವಕುಮಾರ್

ಸೆಪ್ಟೆಂಬರ್‌ ತಿಂಗಳ ಮೊದಲ ಮೂರು ಬಿಡುವು ನೀಡಿದ್ದ ವರುಣ ಮತ್ತೆ ಅಬ್ಬರ ಶುರು ಮಾಡಿದ್ದಾನೆ. ಕರಾವಳಿ ಹಾಗೂ ಉತ್ತರ ಕರ್ನಾಟಕದ ವಿಜಯಪುರ, ರಾಯಚೂರು, ಬಾಗಲಕೋಟೆ, ಕಲಬುರಗಿಯಲ್ಲಿ ಮುಂದಿನ 2-3 ದಿನಗಳ ಕಾಲ ಭಾರೀ ಮಳೆ ಸುರಿಯುವ ಭೀತಿ ಇದೆ. ಇನ್ನೊಂದೆಡೆ ವರುಣಾರ್ಭಟ ಮುಂದುವರಿದರೆ ಇಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಸಾಧ್ಯತೆ ಇದೆ.

ಇದಲ್ಲದೆ ಸೆಪ್ಟೆಂಬರ್‌ 28 ಮತ್ತು 29ರಂದು ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ: ಮಧುಮೇಹಿಗಳು ಹಿತ್ತಲಲ್ಲೇ ಸಿಗುವ ʼಈʼ ಎಲೆಯನ್ನ ಜಗಿದ್ರೆ ಕ್ಷಣಾರ್ಧಲ್ಲೇ ನಾರ್ಮಲ್‌ ಆಗುತ್ತೆ ಶುಗರ್‌! ಮತ್ತೆಂದೂ ಹೆಚ್ಚಾಗೋದೇ ಇಲ್ಲ!

ಮೀನುಗಾರಿಕೆ ನಿಷೇಧ:
ಭಾರೀ ಮಳೆಯಿಂದಾಗಿ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು ಆಳ ಸಮುದ್ರ ಮೀನುಗಾರಿಕೆ ಮತ್ತೆ ಸ್ಥಗಿತಗೊಂಡಿದೆ. ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಮುದ್ರ ಪ್ರಕ್ಷುಬ್ದಗೊಂಡಿದೆ. ಅಷ್ಟೇ ಅಲ್ಲದೆ ವೇಗವಾಗಿ ಗಾಳಿ ಬೀಸುತ್ತಿರುವ ಕಾರಣ ಮೀನುಗಾರಿಕೆಗೆ ತೆರಳಿದ್ದ ಬೋಟುಗಳೆಲ್ಲಸೋಮವಾರ ಸಂಜೆಯೇ ತೀರಕ್ಕೆ ಮರಳಿವೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News