Military chopper crashes : 'ಸೇನಾ ಮುಖ್ಯಸ್ಥರಿದ್ದ ಹೆಲಿಕಾಪ್ಟರ್ ಪತನ'

ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಕೂಡ ಹೆಲಿಕಾಪ್ಟರ್‌ನಲ್ಲಿದ್ದರು, ಆದರೆ ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ

Written by - Channabasava A Kashinakunti | Last Updated : Dec 8, 2021, 03:34 PM IST
  • ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ಪತನ
  • ಈ ಹೆಲಿಕಾಪ್ಟರ್ ನಲ್ಲಿ ಸೇನಾ ಹಿರಿಯ ಅಧಿಕಾರಿಗಳು ಇದ್ದರು
  • ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Military chopper crashes : 'ಸೇನಾ ಮುಖ್ಯಸ್ಥರಿದ್ದ ಹೆಲಿಕಾಪ್ಟರ್ ಪತನ' title=

ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿದ್ದ IAF Mi-17V5 ಹೆಲಿಕಾಪ್ಟರ್ ಇಂದು ತಮಿಳುನಾಡಿನ ಕುನೂರ್ ಬಳಿ ಅಪಘಾತಕ್ಕೀಡಾಗಿದೆ.ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಕೂಡ ಹೆಲಿಕಾಪ್ಟರ್‌ನಲ್ಲಿದ್ದರು.

ತಮಿಳುನಾಡಿನ ಕೊಯಮತ್ತೂರು ಮತ್ತು ಸೂಲೂರು ನಡುವೆ ಅಪಘಾತಕ್ಕೀಡಾದ ಮಿ-ಸಿರೀಸ್ ಹೆಲಿಕಾಪ್ಟರ್‌ನಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಪತ್ನಿ ಮಧುಲಿಕಾ ರಾವತ್  ಸಿಬ್ಬಂದಿ ಇದ್ದರು. 

ಮಿ-ಸಿರೀಸ್ ಹೆಲಿಕಾಪ್ಟರ್‌ನಲ್ಲಿ ಸೇರಿ ಒಟ್ಟು 15 ಜನ ಇದ್ದು ಅದರಲ್ಲಿ 5 ಜನ ಮೃತರಾಗಿದ್ದಾರೆ ಮತ್ತು ಮೂರು ಜನ ಗಾಯಗೊಂಡಿದ್ದಾರೆ. ಸಧ್ಯ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಝೀ ನ್ಯೂಸ್ ಮೂಲಗಳ ಪ್ರಕಾರ, ಸಿಡಿಎಸ್ ರಾವತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅವರ ಸ್ಥಿತಿ  ಗಂಭೀರದ್ದೂ, ಚಿಕಿತ್ಸೆಗೆ ಪ್ರತಿಕ್ರಿಯಿಸುತ್ತಿದ್ದಾರೆ. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶೀಘ್ರದಲ್ಲೇ ಸಂಸತ್ತಿನಲ್ಲಿ ಅಪಘಾತದ ಬಗ್ಗೆ ವಿವರಿಸಲಿದ್ದಾರೆ.

ವಾಯು ಸೇನೆ ಅಧಿಕೃತ ಟ್ವಿಟ್ಟರ್ ನಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಟ್ವೀಟ್ ನಲ್ಲಿ,  ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿದ್ದ IAF Mi-17V5 ಹೆಲಿಕಾಪ್ಟರ್ ಇಂದು ತಮಿಳುನಾಡಿನ ಕುನೂರ್ ಬಳಿ ಅಪಘಾತಕ್ಕೀಡಾಗಿದೆ. ಅಪಘಾತದ ಕಾರಣ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ಬರೆದುಕೊಂಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News