ಉತ್ತರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ನಂತರ ಬೆಂಕಿ ಹಚ್ಚಿದ ಘಟನೆ ನವೆಂಬರ್ 21 ರಂದು ನಡೆದಿದೆ.  

Last Updated : Nov 30, 2019, 04:47 PM IST
ಉತ್ತರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ title=
ಸಾಂದರ್ಭಿಕ ಚಿತ್ರ

ನವದೆಹಲಿ: ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ನಂತರ ಬೆಂಕಿ ಹಚ್ಚಿದ ಘಟನೆ ನವೆಂಬರ್ 21 ರಂದು ನಡೆದಿದೆ.ಶೇ 70 ರಷ್ಟು ಸುಟ್ಟ ಗಾಯಗಳೊಂದಿಗೆ ಆಕೆಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿಂದ ಅವರನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ ಬಾಲಕಿ ತನ್ನ ಮನೆಯಲ್ಲಿ ಒಬ್ಬಂಟಿಯಾಗಿದ್ದಳು, ಆಕೆಯ ನೆರೆಹೊರೆಯವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಘಟನೆ ನಡೆದ ಸಮಯದಲ್ಲಿ ಬಾಲಕಿಯ ತಾಯಿ ಮತ್ತು ಸಹೋದರ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಬೇರೆ ಗ್ರಾಮಕ್ಕೆ ಹೋಗಿದ್ದರು ಎಂದು ವರದಿಯಾಗಿದೆ. ಪೋಲಿಸ್ ದೂರು ದಾಖಲಿಸುವ ಬಗ್ಗೆ ಸಂತ್ರಸ್ತೆಯು ಬೆದರಿಕೆ ಹಾಕಿದ್ದಾನೆ ಎಂದು ಪ್ರಾಥಮಿಕ ತನಿಖೆಯು ಸೂಚಿಸಿದೆ, ನಂತರ ಅವನು ಅವಳ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.

ನವೆಂಬರ್ 22 ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಮತ್ತು ಅವರನ್ನು 14 ದಿನಗಳ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ. ಐಪಿಸಿಯ 376 (ಅತ್ಯಾಚಾರ), 307 (ಕೊಲೆ ಯತ್ನ), 452 (ಅತಿಕ್ರಮಣ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Trending News