Tamil Nadu Election Result 2021 : ತಮಿಳುನಾಡು ಸಿಎಂ ಆಗಿ ಸ್ಟಾಲಿನ್ ಅಧಿಕಾರಕ್ಕೆ ಮುಹೂರ್ತ ಫಿಕ್ಸ್..! 

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ DMK ಮೈತ್ರಿಕೂಟ ಭಾರಿ ಮುನ್ನಡೆ ಸಾಧಿಸಿದ್ದು, ಎಐಎಡಿಎಂಕೆ 91 ಕ್ಷೇತ್ರಗಳಲ್ಲಿ ಮುನ್ನಡೆ

Last Updated : May 2, 2021, 12:59 PM IST
  • ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟ
  • ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ DMK ಮೈತ್ರಿಕೂಟ ಭಾರಿ ಮುನ್ನಡೆ ಸಾಧಿಸಿದ್ದು, ಎಐಎಡಿಎಂಕೆ 91 ಕ್ಷೇತ್ರಗಳಲ್ಲಿ ಮುನ್ನಡೆ
  • ಡಿಎಂಕೆ 141 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
Tamil Nadu Election Result 2021 : ತಮಿಳುನಾಡು ಸಿಎಂ ಆಗಿ ಸ್ಟಾಲಿನ್ ಅಧಿಕಾರಕ್ಕೆ ಮುಹೂರ್ತ ಫಿಕ್ಸ್..!  title=

ತಮಿಳುನಾಡು : ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ.

ತಮಿಳುನಾಡು ವಿಧಾನಸಭೆ ಚುನಾವಣೆ(Tamil Nadu Election Result 2021)ಯಲ್ಲಿ DMK ಮೈತ್ರಿಕೂಟ ಭಾರಿ ಮುನ್ನಡೆ ಸಾಧಿಸಿದ್ದು, ಎಐಎಡಿಎಂಕೆ 91 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಡಿಎಂಕೆ 141 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಇದನ್ನೂ ಓದಿ : Randeep Surjewala : ಪಂಚರಾಜ್ಯ ಚುನಾವಣಾ ಫಲಿತಾಂಶದ ನಡುವೆಯೇ ಕಾಂಗ್ರೆಸ್ ನಿಂದ​ ಮಹತ್ವದ ನಿರ್ಧಾರ!

ಮೇ. 6 ರಂದು ತಮಿಳುನಾಡಿನಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಮುಖ್ಯಮಂತ್ರಿಯಾಗಿ ಸ್ಟಾಲಿನ್(MK Stalin) ಪ್ರಮಾಣವಚನ ಸ್ವೀಕರಿಸಲಿದ್ದಾರೆ. 234 ವಿಧಾನಸಭೆ ಸದಸ್ಯ ಬಲ ಹೊಂದಿರುವ ತಮಿಳುನಾಡಿನಲ್ಲಿ ಬಹುಮತಕ್ಕೆ 118 ಸದಸ್ಯರ ಬಲ ಬೇಕಿದೆ. 141 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಡಿಎಂ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ.

ಇದನ್ನೂ ಓದಿ : Assembly Elections 2021: AIADMKಯನ್ನು ಹಿಂದಿಕ್ಕಿ ಮುನ್ನಡೆಯತ್ತ DMK

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News