ನೂತನ ಸರ್ಕಾರಕ್ಕೆ ‘ಸಪ್ತ ನಾರಿಶಕ್ತಿ’: ಮೋದಿ 3.0ನಲ್ಲಿರುವ ಏಳು ಮಹಿಳಾಮಣಿಗಳ ಹಿನ್ನೆಲೆ ಏನು? ಇಲ್ಲಿದೆ ಮಾಹಿತಿ

PM Modi 3.0, Women Ministers: ಕಳೆದ ದಿನ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ನಿರ್ಮಲಾ ಸೀತಾರಾಮನ್ ಮತ್ತು ಅನ್ನಪೂರ್ಣ ದೇವಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Written by - Bhavishya Shetty | Last Updated : Jun 10, 2024, 05:44 PM IST
    • ಮೂರನೇ ಬಾರಿಗೆ ಪ್ರಧಾನಿಯಾಗಿ ಕಳೆದ ದಿನ ಪ್ರಮಾಣವಚನ ಸ್ವೀಕರಿಸಿದ ಮೋದಿ
    • ಸಚಿವ ಸಂಪುಟದ 72 ಸದಸ್ಯರೂ ಪ್ರಮಾಣ ವಚನ ಸ್ವೀಕಾರ
    • ನಿರ್ಮಲಾ ಸೀತಾರಾಮನ್ ಮತ್ತು ಅನ್ನಪೂರ್ಣ ದೇವಿ ಸಂಪುಟ ಸಚಿವರಾಗಿ ಪ್ರಮಾಣ ವಚನ
ನೂತನ ಸರ್ಕಾರಕ್ಕೆ ‘ಸಪ್ತ ನಾರಿಶಕ್ತಿ’: ಮೋದಿ 3.0ನಲ್ಲಿರುವ ಏಳು ಮಹಿಳಾಮಣಿಗಳ ಹಿನ್ನೆಲೆ ಏನು? ಇಲ್ಲಿದೆ ಮಾಹಿತಿ title=
7 Women Ministers of Central Government

PM Modi 3.0, 7 Women Ministers: ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಕಳೆದ ದಿನ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇವರ ಜೊತೆಗೆ ಸಚಿವ ಸಂಪುಟದ 72 ಸದಸ್ಯರೂ ಪ್ರಮಾಣ ವಚನ ಸ್ವೀಕರಿಸಿದ್ದು, ಇದರಲ್ಲಿ ಏಳು ಮಂದಿ ಮಹಿಳೆಯರಿದ್ದಾರೆ. ಅದರಲ್ಲಿ ಇಬ್ಬರಿಗೆ ಕ್ಯಾಬಿನೆಟ್ ದರ್ಜೆಯಲ್ಲಿ ಅಧಿಕಾರ ನೀಡಲಾಗಿದೆ.

ಕಳೆದ ದಿನ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ನಿರ್ಮಲಾ ಸೀತಾರಾಮನ್ ಮತ್ತು ಅನ್ನಪೂರ್ಣ ದೇವಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ: ಈ ಖ್ಯಾತ ನಟಿ ಜೊತೆ ಹೆಚ್ಚಾಯ್ತಾ ಆಪ್ತತೆ? ಯುವರಾಜ್-ಶ್ರೀದೇವಿ ಡಿವೋರ್ಸ್’ಗೆ ಇದೇ ಕಾರಣವಾಯ್ತಾ?

ರಾಜ್ಯಸಭಾ ಸಂಸದರಾಗಿರುವ ಸೀತಾರಾಮನ್ ಈ ಹಿಂದೆ ಹಣಕಾಸು ಮತ್ತು ರಕ್ಷಣಾ ಇಲಾಖೆಯಂತಹ ಮಹತ್ವದ ಖಾತೆಗಳನ್ನು ನಿರ್ವಹಿಸಿದ್ದರು. ಇವರ ಜೊತೆ ಎರಡು ಬಾರಿ ಸಂಸದೆಯಾಗಿದ್ದ ಅನ್ನಪೂರ್ಣ ದೇವಿ ಕೂಡ ರಾಜ್ಯ ಸಚಿವ ಸ್ಥಾನದಿಂದ ಕ್ಯಾಬಿನೆಟ್ ಸಚಿವ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಇನ್ನುಳಿದಂತೆ ಅನುಪ್ರಿಯಾ ಪಟೇಲ್, ರಕ್ಷಾ ಖಡ್ಸೆ, ಸಾವಿತ್ರಿ ಠಾಕೂರ್, ಶೋಭಾ ಕರಂದ್ಲಾಜೆ ಮತ್ತು ನಿಮುಬೆನ್ ಬಂಬಾನಿಯಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಅನುಪ್ರಿಯಾ ಪಟೇಲ್ ಬಿಜೆಪಿಯ ಮಿತ್ರ ಪಕ್ಷವಾದ ಅಪ್ನಾ ದಳದ (ಸೋನೆಲಾಲ್) ಮುಖ್ಯಸ್ಥೆ. ಈ ಹಿಂದೆ ನರೇಂದ್ರ ಮೋದಿ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ರಾಜ್ಯ ಸಚಿವರಾಗಿದ್ದರು. ಮೋದಿ 2.0 ನಲ್ಲಿ ವಾಣಿಜ್ಯ ಮತ್ತು ಉದ್ಯಮದ ಕಿರಿಯ ಸಚಿವರಾಗಿ ನೇಮಕಗೊಂಡಿದ್ದರು.

ರಕ್ಷಾ ಖಡ್ಸೆ ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಏಕನಾಥ್ ಖಡ್ಸೆ ಅವರ ಸೊಸೆ. ರೇವರ್‌’ನಿಂದ ಮೂರು ಬಾರಿ ಸಂಸದರಾಗಿರುವ ಖಡ್ಸೆ, ಈ ಹಿಂದೆ ಸರಪಂಚ್ ಮತ್ತು ಜಿಲ್ಲಾ ಪರಿಷತ್ ಸದಸ್ಯರಾಗಿ ಕೆಲಸ ಮಾಡಿದ್ದಾರೆ.

ಮೋದಿ 3.0 ಗೆ ಸೇರ್ಪಡೆಗೊಂಡ ಮತ್ತೊಬ್ಬ ಸಚಿವೆ ಸಾವಿತ್ರಿ ಠಾಕೂರ್, ಧಾರ್‌’ನಿಂದ ಎರಡು ಬಾರಿ ಸಂಸದರಾಗಿದ್ದಾರೆ. 2014 ರ ಚುನಾವಣೆಯಲ್ಲಿ ಗೆದ್ದಿದ್ದ ಸಾವಿತ್ರಿ, 2019 ರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಆದರೆ 2024 ರಲ್ಲಿ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಸಾವಿತ್ರಿ ಠಾಕೂರ್ ಕೂಡ ಪಂಚಾಯತ್ ಮಟ್ಟದಲ್ಲಿ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ.

ಕರ್ನಾಟಕದಿಂದ ಎರಡು ಬಾರಿ ಬಿಜೆಪಿ ಸಂಸದರಾಗಿರುವ ಶೋಭಾ ಕರಂದ್ಲಾಜೆ ಈ ಹಿಂದೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಮೋದಿ 3.0 ನಲ್ಲಿ ಉಳಿಸಿಕೊಂಡಿರುವ ಎರಡನೇ ನರೇಂದ್ರ ಮೋದಿ ಸರ್ಕಾರದ ಮಂತ್ರಿಗಳಲ್ಲಿ ಇವರೂ ಕೂಡ ಒಬ್ಬರು. ಈ ಹಿಂದೆ ಕೇಂದ್ರ ಸರ್ಕಾರದಲ್ಲಿ ಆಹಾರ ಸಂಸ್ಕರಣಾ ಉದ್ಯಮಗಳು ಮತ್ತು ಕೃಷಿ ಮತ್ತು ರೈತರ ಕಲ್ಯಾಣ ಖಾತೆಗಳನ್ನು ನಿರ್ವಹಿಸಿದ್ದಾರೆ.

ಇದನ್ನೂ ಓದಿ: ದೊಡ್ಮನೆ ‘ಯುವ’ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನದ ಬಗ್ಗೆ ಮೌನ ಮುರಿದ ಶ್ರೀದೇವಿ ಹೇಳಿದ್ದು ಹೀಗೆ

57 ವರ್ಷದ ನಿಮುಬೆನ್ ಭಂಬಾನಿಯಾ ಭಾವನಗರದಿಂದ ಸಂಸದರಾಗಿದ್ದಾರೆ. ಮಾಜಿ ಶಿಕ್ಷಕಿಯಾಗಿರುವ ಇವರು, ಈ ಹಿಂದೆ ಭಾವನಗರ ಮೇಯರ್ ಆಗಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿಯಲ್ಲಿ ವಿವಿಧ ಸಾಂಸ್ಥಿಕ ಪಾತ್ರಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ ಇವರಿಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News