ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಬಜೆಟ್‌ಗೆ ಒಂದು ದಿನ ಮೊದಲು ಗುರುವಾರ ಆರ್ಥಿಕ ಸಮೀಕ್ಷೆಯನ್ನು ಸಂಸತ್ತಿನಲ್ಲಿ ಪರಿಚಯಿಸಲಾಯಿತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೇಲ್ಮನೆ ರಾಜ್ಯಸಭೆಯಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು.

Last Updated : Jul 5, 2019, 07:22 AM IST
ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ title=

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸತತ ಎರಡನೇ ಅವಧಿಗೂ ಭರ್ಜರಿ ಬಹುಮತದೊಂದಿಗೆ ಸತತ ಎರಡನೇ ಬಾರಿ ಅಧಿಕಾರಕ್ಕೇರಿರುವ ಪ್ರಧಾನಿ ಮೋದಿ ನೇತೃತ್ವದ ಎನ್​ಡಿಎ 2.0 ಸರ್ಕಾರದಲ್ಲಿ ಮೊದಲ ಪೂರ್ಣ ಬಜೆಟ್ ಮಂಡಿಸಲಿದ್ದಾರೆ. ಭಾರತದ ಸಂಸತ್​ ಇತಿಹಾಸದಲ್ಲಿ ಹಣಕಾಸು ಖಾತೆ ಪಡೆದು, ಬಜೆಟ್​ ಮಂಡಿಸಲಿರುವ ಮೊದಲ ಮಹಿಳೆ ಹೆಗ್ಗಳಿಕೆಗೆ ನಿರ್ಮಲಾ ಸೀತಾರಾಮನ್ ಪಾತ್ರರಾಗಲಿದ್ದಾರೆ.

ಇದೇ ಮೊದಲ ಬಾರಿಗೆ ವಿತ್ತ ಇಲಾಖೆಯ ಜವಾಬ್ದಾರಿ ಹೊತ್ತಿರುವ ನಿರ್ಮಲಾ ಸೀತಾರಾಮನ್ ಅವರ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಬಜೆಟ್‌ಗೆ ಒಂದು ದಿನ ಮೊದಲು ಗುರುವಾರ ಆರ್ಥಿಕ ಸಮೀಕ್ಷೆಯನ್ನು ಸಂಸತ್ತಿನಲ್ಲಿ ಪರಿಚಯಿಸಲಾಯಿತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೇಲ್ಮನೆ ರಾಜ್ಯಸಭೆಯಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು. ಆರ್ಥಿಕ ಸಮೀಕ್ಷೆಯಲ್ಲಿ, 2019-20ನೇ ಸಾಲಿನ ಆರ್ಥಿಕ ಬೆಳವಣಿಗೆಯ ದರವನ್ನು ಶೇಕಡಾ 7 ಎಂದು ಅಂದಾಜಿಸಲಾಗಿದೆ. ಈ ಸಮೀಕ್ಷೆಯನ್ನು ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಮಣಿಯನ್ ಸಿದ್ಧಪಡಿಸಿದ್ದಾರೆ.

2025 ರ ವೇಳೆಗೆ 50 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿ ಸಾಧಿಸಲು ಭಾರತವು ಎಂಟು ಶೇಕಡಾ ಬೆಳವಣಿಗೆಯ ದರವನ್ನು ಕಾಯ್ದುಕೊಳ್ಳಬೇಕಾಗುತ್ತದೆ ಎಂದು ಹೇಳಲಾಗಿದೆ. 2019 ರ ಹಣಕಾಸು ವರ್ಷದಲ್ಲಿ, ಸಾಮಾನ್ಯ ಹಣಕಾಸಿನ ಕೊರತೆಯನ್ನು ಶೇಕಡಾ 5.8 ಎಂದು ಅಂದಾಜಿಸಲಾಗಿದ್ದರೆ, 2018 ರ ಆರ್ಥಿಕ ವರ್ಷದಲ್ಲಿ ಇದು 6.4 ಶೇಕಡಾ ಇತ್ತು. ಇದಲ್ಲದೆ, ಆರ್ಥಿಕ ಸಮೀಕ್ಷೆಯಲ್ಲಿ 2018-19: 2019-20ರ ಅವಧಿಯಲ್ಲಿ ತೈಲ ಬೆಲೆಗಳಲ್ಲಿ ಇಳಿಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

Trending News