ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಜಾಮೀನು ನಕಾರ

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ರಾಷ್ಟ್ರ ರಾಜಧಾನಿಯ ನ್ಯಾಯಾಲಯವು ಜಾಮೀನು ನಿರಾಕರಿಸಿದೆ.

Written by - Zee Kannada News Desk | Last Updated : Jun 18, 2022, 03:57 PM IST
  • ಭ್ರಷ್ಟಾಚಾರ ತಡೆ ಕಾಯ್ದೆಯಡಿ 2017ರ ಆಗಸ್ಟ್‌ನಲ್ಲಿ ಸಿಬಿಐ ದಾಖಲಿಸಿದ್ದ ಪ್ರಕರಣದ ಆಧಾರದ ಮೇಲೆ ಜಾರಿ ಪ್ರಕರಣದ ಮಾಹಿತಿ ವರದಿ (ಇಸಿಐಆರ್) ದಾಖಲಿಸಿಕೊಂಡಿದ್ದು, ದೆಹಲಿ ಸಚಿವರನ್ನು ಇಡಿ ಬಂಧಿಸಿದೆ.
ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಜಾಮೀನು ನಕಾರ  title=
file photo

ನವದೆಹಲಿ: ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ರಾಷ್ಟ್ರ ರಾಜಧಾನಿಯ ನ್ಯಾಯಾಲಯವು ಜಾಮೀನು ನಿರಾಕರಿಸಿದೆ.

ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಗೋಯೆಲ್ ಅವರು ಆದೇಶ ಹೊರಡಿಸಿದ್ದಾರೆ. ಅವರು ಜೂನ್ 14 ರಂದು ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿದ್ದರು.ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈನ್ ಮೇ 30 ರಿಂದ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ಆರ್ ಆರ್ ಆರ್ ಮತ್ತು ಕೆಜಿಎಫ್ 2 ನಡುವೆ ಯಾವುದು ಫೇವರಿಟ್? ಎಂದು ಕೇಳಿದ್ದಕ್ಕೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತೇ ?

ಭ್ರಷ್ಟಾಚಾರ ತಡೆ ಕಾಯ್ದೆಯಡಿ 2017ರ ಆಗಸ್ಟ್‌ನಲ್ಲಿ ಸಿಬಿಐ ದಾಖಲಿಸಿದ್ದ ಪ್ರಕರಣದ ಆಧಾರದ ಮೇಲೆ ಜಾರಿ ಪ್ರಕರಣದ ಮಾಹಿತಿ ವರದಿ (ಇಸಿಐಆರ್) ದಾಖಲಿಸಿಕೊಂಡಿದ್ದು, ದೆಹಲಿ ಸಚಿವರನ್ನು ಇಡಿ ಬಂಧಿಸಿದೆ.

ಜೈನ್ ಅವರಿಗೆ ಸಂಪರ್ಕ ಹೊಂದಿರುವ ಕನಿಷ್ಠ ನಾಲ್ಕು ಕಂಪನಿಗಳ ಮೂಲಕ ಹಣ ಲಪಟಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇಡಿ ಕಸ್ಟಡಿ ಮುಗಿದ ನಂತರ ಜೂನ್ 13 ರಂದು ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News