Most Popular CM: ಯೋಗಿ ಆದಿತ್ಯನಾಥ್ ಅಲ್ಲ… ದೇಶದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಇವರೇ!

Most Popular Chief Ministers of India: ಮಾಧ್ಯಮ ವರದಿಗಳ ಪ್ರಕಾರ, ಸಮೀಕ್ಷಾ ವರದಿಯಲ್ಲಿ ನೀಡಲಾದ ಪಟ್ಟಿಯಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮೊದಲ ಸ್ಥಾನದಲ್ಲಿದ್ದಾರೆ. 52.7 ರಷ್ಟು ರೇಟಿಂಗ್ ಪಡೆದಿದ್ದು ಅಗ್ರಸ್ಥಾನದಲ್ಲಿದ್ದಾರೆ, ಇನ್ನು ಎರಡನೇ ಸ್ಥಾನದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿದ್ದು, 51.3 ಶೇಕಡಾ ರೇಟಿಂಗ್ ಪಡೆದಿದ್ದಾರೆ.

Written by - Bhavishya Shetty | Last Updated : Feb 18, 2024, 04:21 PM IST
    • ದೇಶದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಯಾರು?
    • 52.7 ರಷ್ಟು ರೇಟಿಂಗ್ ಪಡೆದಿದ್ದು ಅಗ್ರಸ್ಥಾನದಲ್ಲಿದ್ದಾರೆ ನವೀನ್ ಪಟ್ನಾಯಕ್
    • ಮುಖ್ಯಮಂತ್ರಿಗಳ ಸಮೀಕ್ಷೆಯಲ್ಲಿ ಯೋಗಿ ಆದಿತ್ಯನಾಥ್ ಅವರಿಗೆ ಎರಡನೇ ಸ್ಥಾನ
Most Popular CM: ಯೋಗಿ ಆದಿತ್ಯನಾಥ್ ಅಲ್ಲ… ದೇಶದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಇವರೇ! title=
Most Popular Chief Minister of the Country

Most Popular Chief Ministers of India: ದೇಶದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಸಮೀಕ್ಷೆ ನಡೆಸಲಾಗಿದ್ದು, ವರದಿ ಹೊರಬಿದ್ದಿದೆ. ಯಾವ ನಾಯಕನನ್ನು ಜನರು ಹೆಚ್ಚು ಒಪ್ಪಿಕೊಂಡಿದ್ದಾರೆ ಎಂಬುದನ್ನು ಕಂಡುಹಿಡಿಯಲು ಈ ಸಮೀಕ್ಷೆಯನ್ನು ನಡೆಸಲಾಗಿದೆ. ಈ ವರದಿಯಲ್ಲಿ ಕುತೂಹಲಕಾರಿ ಫಲಿತಾಂಶ ಹೊರಬಿದ್ದಿದೆ.

ಇದನ್ನೂ ಓದಿ: Sarfaraz Khan Love Story: ಸರ್ಫರಾಜ್ ಖಾನ್ ಪತ್ನಿ ಯಾರು? ಈತ ಆ 'ಕಾಶ್ಮೀರಿ ಬ್ಯೂಟಿ'ಗೆ ಮನಸೋತಿದ್ದು ಹೇಗೆ?!  

ಮಾಧ್ಯಮ ವರದಿಗಳ ಪ್ರಕಾರ, ಸಮೀಕ್ಷಾ ವರದಿಯಲ್ಲಿ ನೀಡಲಾದ ಪಟ್ಟಿಯಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮೊದಲ ಸ್ಥಾನದಲ್ಲಿದ್ದಾರೆ. 52.7 ರಷ್ಟು ರೇಟಿಂಗ್ ಪಡೆದಿದ್ದು ಅಗ್ರಸ್ಥಾನದಲ್ಲಿದ್ದಾರೆ, ಇನ್ನು ಎರಡನೇ ಸ್ಥಾನದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿದ್ದು, 51.3 ಶೇಕಡಾ ರೇಟಿಂಗ್ ಪಡೆದಿದ್ದಾರೆ. ಮೂರನೇ ಸ್ಥಾನದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು 48.6 ಶೇಕಡಾ ರೇಟಿಂಗ್ ಪಡೆದಿದ್ದಾರೆ. 42.6 ರಷ್ಟು ರೇಟಿಂಗ್ ಪಡೆದಿರುವ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ನಾಲ್ಕನೇ ಸ್ಥಾನದಲ್ಲಿದ್ದಾರೆ. 41.4 ರಷ್ಟು ರೇಟಿಂಗ್ ಪಡೆದ ತ್ರಿಪುರಾದ ಮುಖ್ಯಮಂತ್ರಿ 5 ನೇ ಸ್ಥಾನದಲ್ಲಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಮುಖ್ಯಮಂತ್ರಿಗಳ ಸಮೀಕ್ಷೆಯಲ್ಲಿ ಯೋಗಿ ಆದಿತ್ಯನಾಥ್ ಎರಡನೇ ಅತ್ಯಂತ ಜನಪ್ರಿಯ ನಾಯಕರಾಗಿದ್ದಾರೆ. ಆದರೆ ಇವೆಲ್ಲದ ಹೊರತಾಗಿ, ಫೆಬ್ರವರಿ 2024ರ ಆರಂಭದಲ್ಲಿ ಹೊರಬಂದ ಮಾಹಿತಿ ಪ್ರಕಾರ, ಅವರ X ಖಾತೆಯು 27.4 ಮಿಲಿಯನ್ ಅನುಯಾಯಿಗಳನ್ನು ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ (95.2 ಮಿಲಿಯನ್) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ (34.4 ಮಿಲಿಯನ್) ನಂತರ ಮೂರನೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ನಾಯಕರಾಗಿದ್ದ ಯೋಗಿ.

ಇದನ್ನೂ ಓದಿ: Yashasvi Jaiswal: ದ್ವಿಶತಕ ಮಾತ್ರವಲ್ಲ, ಸಿಕ್ಸರ್’ನಲ್ಲೂ ದಾಖಲೆ ಬರೆದ ಯಶಸ್ವಿ: ಇಬ್ಬರು ದಿಗ್ಗಜರ

ಆದರೆ ಇಂಡಿಯಾ ಟುಡೇ ಮೂಡ್ ಆಫ್ ದಿ ನೇಷನ್ (MOTN) ಸಮೀಕ್ಷೆಯಲ್ಲಿ, ಯೋಗಿ ಆದಿತ್ಯನಾಥ್ ಸತತ 8 ನೇ ಬಾರಿಗೆ 30 ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಉಳಿದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News