ನವದೆಹಲಿ: ಕೊಲೆ ಪ್ರಕರಣದ ಆರೋಪಿಯಾಗಿದ್ದ, ಸುಮಾರು 11ಕ್ಕೂ ಅಧಿಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಶಾರ್ಪ್ ಶೂಟರ್ ನನ್ನು ಬಂಧಿಸಿರುವುದಾಗಿ ದೆಹಲಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಆರೋಪಿ ಅರವಿಂದ ಕುಮಾರ್(32)ನನ್ನು ತಮಿಳುನಾಡಿನ ವೆಲ್ಲೂರಿನಲ್ಲಿ ಪೊಲೀಸರು ಎಪ್ರಿಲ್ 29ರಂದು ಬಂಧಿಸಿದ್ದಾರೆ. ಅನಿಲ್ ಧುಜಾನಾ-ರಂದೀಪ್ ಭಾಟಿ ಗ್ಯಾಂಗ್ ನಲ್ಲಿ ಆತ ಶಾರ್ಪ್ ಶೂಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸಂವೇದನೆಯ ಕೊಲೆಯ ಸಾಕ್ಷಿಯ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆತನನ್ನು ಬಂಧಿಸಲಾಗಿದೆ. ಈ ಬಗ್ಗೆ ಹೊಸ ಅಶೋಕ್ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿ ಮತ್ತು ಯುಪಿ ಪೊಲೀಸ್ ಠಾಣೆಗಳಲ್ಲಿ ಕುಮಾರ್ ವಿರುದ್ಧ 11 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.