ಎಂಪಿ ಎಂಬುದು ಕೇವಲ ಟ್ಯಾಗ್, ನನ್ನನ್ನು ತಡೆಯಲು ಬಿಜೆಪಿಗೆ ಸಾಧ್ಯವಿಲ್ಲ: ರಾಹುಲ್ ಗಾಂಧಿ

ಲೋಕಸಭೆ ಸಂಸದರಾಗಿ ಅನರ್ಹಗೊಂಡ ನಂತರ ಮೊದಲ ಬಾರಿಗೆ ವಯನಾಡ್‌ಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು "ಎಂಪಿ ಎನ್ನುವುದು ಕೇವಲ ಟ್ಯಾಗ್ ಅಥವಾ ಸ್ಥಾನ ಅಷ್ಟೇ ಆದರೆ ಅದು ವಯನಾಡ್ ಜನರನ್ನು ಪ್ರತಿನಿಧಿಸುವುದನ್ನು ತಡೆಯುವುದಿಲ್ಲ ಎಂದು ಹೇಳಿದರು.

Written by - Manjunath N | Last Updated : Apr 11, 2023, 09:59 PM IST
  • ಬಿಜೆಪಿ ಸಚಿವರು ಸಂಸತ್ತಿನಲ್ಲಿ ನನ್ನ ಬಗ್ಗೆ ಸುಳ್ಳು ಹೇಳಿದರು ಮತ್ತು ನನಗೆ ಮಾತನಾಡಲು ಅವಕಾಶ ನೀಡಲಿಲ್ಲ.
  • ನಾನು ಸಭಾಧ್ಯಕ್ಷರ ಬಳಿಗೂ ಹೋದೆ, ಆದರೆ ನನಗೆ ಮಾತನಾಡಲು ಅವಕಾಶ ನೀಡಲಿಲ್ಲ
  • ಅವರು ನನ್ನ ಮೇಲೆ ಹೆಚ್ಚು ದಾಳಿ ಮಾಡುತ್ತಾರೆ, ನಾನು ಅದೇ ವಿಷಯದ ಬಗ್ಗೆ ಹೆಚ್ಚು ಮಾತನಾಡುತ್ತೇನೆ
ಎಂಪಿ ಎಂಬುದು ಕೇವಲ ಟ್ಯಾಗ್, ನನ್ನನ್ನು ತಡೆಯಲು ಬಿಜೆಪಿಗೆ ಸಾಧ್ಯವಿಲ್ಲ: ರಾಹುಲ್ ಗಾಂಧಿ title=

ನವದೆಹಲಿ: ಲೋಕಸಭೆ ಸಂಸದರಾಗಿ ಅನರ್ಹಗೊಂಡ ನಂತರ ಮೊದಲ ಬಾರಿಗೆ ವಯನಾಡ್‌ಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು "ಎಂಪಿ ಎನ್ನುವುದು ಕೇವಲ ಟ್ಯಾಗ್ ಅಥವಾ ಸ್ಥಾನ ಅಷ್ಟೇ ಆದರೆ ಅದು ವಯನಾಡ್ ಜನರನ್ನು ಪ್ರತಿನಿಧಿಸುವುದನ್ನು ತಡೆಯುವುದಿಲ್ಲ ಎಂದು ಹೇಳಿದರು.ರಾಹುಲ್ ಗಾಂಧಿ ಅವರನ್ನು ತಮ್ಮ  ಕ್ಷೇತ್ರದಲ್ಲಿ ಸಾವಿರಾರು ಜನರು ಬೀದಿಗಳಲ್ಲಿ ಅದ್ದೂರಿ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು.

"ಎಂಪಿ ಎನ್ನುವುದು ಕೇವಲ ಟ್ಯಾಗ್ ಅಥವಾ ಸ್ಥಾನ ಅಷ್ಟೇ ಬಿಜೆಪಿ ನನ್ನ ಟ್ಯಾಗ್, ಸ್ಥಾನ ಮತ್ತು ಮನೆಯನ್ನು ತೆಗೆದುಕೊಳ್ಳಬಹುದು,ಅಥವಾ ಅವರು ನನ್ನನ್ನು ಜೈಲಿಗೆ ಹಾಕಬಹುದು, ಆದರೆ ವಯನಾಡ್ ಜನರನ್ನು ಪ್ರತಿನಿಧಿಸುವುದನ್ನು ತಡೆಯಲು ಅವರಿಂದ ಸಾಧ್ಯವಿಲ್ಲ" ಎಂದು ರಾಹುಲ್ ಗಾಂಧಿ ಹೇಳಿದರು.

ಇದನ್ನೂ ಓದಿ: ಪ್ರವಾಸಕ್ಕೆ ತೆರಳಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

“ಬಿಜೆಪಿ ಸಚಿವರು ಸಂಸತ್ತಿನಲ್ಲಿ ನನ್ನ ಬಗ್ಗೆ ಸುಳ್ಳು ಹೇಳಿದರು ಮತ್ತು ನನಗೆ ಮಾತನಾಡಲು ಅವಕಾಶ ನೀಡಲಿಲ್ಲ.ನಾನು ಸಭಾಧ್ಯಕ್ಷರ ಬಳಿಗೂ ಹೋದೆ, ಆದರೆ ನನಗೆ ಮಾತನಾಡಲು ಅವಕಾಶ ನೀಡಲಿಲ್ಲ ... ಅವರು ನನ್ನ ಮೇಲೆ ಹೆಚ್ಚು ದಾಳಿ ಮಾಡುತ್ತಾರೆ, ನಾನು ಅದೇ ವಿಷಯದ ಬಗ್ಗೆ ಹೆಚ್ಚು ಮಾತನಾಡುತ್ತೇನೆ ...ಆದರೆ ನಾನು ಎಂದಿಗೂ ನಿಲ್ಲುವುದಿಲ್ಲ. ಈ ಅನರ್ಹತೆಯು ವಯನಾಡ್ ಜನರೊಂದಿಗೆ ನನ್ನ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ" ಎಂದು ಅವರು ಹೇಳಿದರು.

ಇದನ್ನೂ ಓದಿ: ಹೊಗೆನಕಲ್ನಲ್ಲಿ ಹಗಲು ದರೋಡೆ: ₹750 ಬೋಟಿಂಗ್ ಗೆ ₹3500 ಶುಲ್ಕ- ಪ್ರವಾಸಿಗರ ಆಕ್ರೋಶ

2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ‘ಮೋದಿ ಉಪನಾಮ ಟೀಕೆ’ಗೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ನಂತರ ಕಳೆದ ತಿಂಗಳು ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡ ನಂತರ ರಾಹುಲ್ ಗಾಂಧಿ ಮೊದಲ ಬಾರಿಗೆ ವಾಯ್ ನಾಡಿಗೆ ಭೇಟಿ ನೀಡಿದರು.

ರಾಹುಲ್ ಸ್ವಾಗತದ ವೇಳೆ ವಯನಾಡ್‌ನಲ್ಲಿ ಹಿಂದೆಂದೂ ಕಂಡರಿಯದ ಅತಿ ದೊಡ್ಡ ಜನಸಂದಣಿ ಕಂಡುಬಂದಿದೆ ಎಂದು ಕೆಲವು ಸ್ಥಳೀಯರು ಹೇಳಿದ್ದಾರೆ. ರಾಹುಲ್ ಗಾಂಧಿ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ವಯನಾಡಿನಲ್ಲಿ ಸಿಪಿಐನ ಪಿಪಿ ಸುನೀರ್ ಅವರನ್ನು 4 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸುವ ಮೂಲಕ ವಿಜಯಶಾಲಿಯಾಗಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News